ಡಿಸೆಂಬರ್ 15ರಂದು ಬಳ್ಳಾರಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಬಳ್ಳಾರಿ, ಡಿಸೆಂಬರ್ 13; ಬಳ್ಳಾರಿಯಲ್ಲಿ ಡಿಸೆಂಬರ್ 15ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದಲ್ಲಿ ಸುಮಾರು 15 ರಿಂದ 20 ಕಂಪನಿಗಳು ಭಾಗವಹಿಸಲಿವೆ.

ಬಳ್ಳಾರಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಮತ್ತು ಬಳ್ಳಾರಿ ಚೇಂಬರ್ ಸ್ಕಿಲ್ ಡೆವಲಪ್‍ಮೆಂಟ್ ಸೆಂಟರ್ ಜಂಟಿಯಾಗಿ ಉದ್ಯೋಗ ಮೇಳ ಆಯೋಜನೆ ಮಾಡಿಡವೆ.

ಡಿಸೆಂಬರ್ 15ರಂದು ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಇಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ. ಆಸಕ್ತರು ಪಾಲ್ಗೊಳ್ಳಬಹುದಾಗಿದೆ.

District Level Job Fair In Ballari On December 15th

ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಉದ್ಯೋಕಾಂಕ್ಷಿಗಳು ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 9019847029, 9900126430, 8073852104, 9844444958.

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಹಾಕಿ; ಬಳ್ಳಾರಿ ಜಿಲ್ಲೆಯ ಕುರಗೋಡು ಪುರಸಭೆ ಯಲ್ಲಾಪುರದ 19ನೇ ವಾರ್ಡ್‍ನಲ್ಲಿ ನಿರ್ಮಿಸಿದ ಗ್ರಂಥಾಲಯ ನಿರ್ವಹಣೆಗೆ ಗೌರವಧನದ ಆಧಾರದ ಮೇಲೆ ಒಬ್ಬ ಮೇಲ್ವಿಚಾರಕರನ್ನು ನೇಮಕ ಮಾಡಲು ಅರ್ಜಿ ಕರೆಯಲಾಗಿದೆ.

ಗ್ರಂಥಾಲಯ ನಿರ್ವಹಣೆಯಲ್ಲಿ ಅನುಭವ ಹೊಂದಿದ ಪದವಿ ಪೂರ್ಣಗೊಳಿಸಿರುವ ಸ್ಥಳೀಯ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 14.

ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರ, ಆಧಾರ್ ಕಾರ್ಡ್ ಗುರುತಿನ ಚೀಟಿ, ರೇಷನ್‍ಕಾರ್ಡ್, ಜೆರಾಕ್ಸ್ ಪ್ರತಿ, ಬ್ಯಾಂಕ್‍ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಇತರೆ ದಾಖಲೆಗಳು ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿಯನ್ನು ಸಂಪರ್ಕಿಸಬೇಕು. ಕರೆ ಮಾಡಲು ದೂರವಾಣಿ ಸಂಖ್ಯೆಗಳು 08392-263166.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+