ವಿಜಯನಗರದಲ್ಲಿ ಫೆಬ್ರವರಿ 14ರಂದು ಉದ್ಯೋಗ ಮೇಳ

ಫೆಬ್ರವರಿ 17ರಂದು ವಿಜಯನಗರದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಸುಮಾರು 15ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳುತ್ತಿವೆ.

ಬಳ್ಳಾರಿ, ಫೆಬ್ರವರಿ 14; ವಿಜಯನಗರದ ಹೊಸಪೇಟೆಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಫೆಬ್ರವರಿ 17ರಂದು ಆಯೋಜನೆ ಮಾಡಲಾಗಿದೆ. 15ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸುತ್ತಿವೆ.

ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಶ್ರೀಮತಿ ಉಗಮದೇವಿ ಭವರ್‍ಲಾಲ್ ನಾಹರ್ ಥಿಯೋಸಾಫಿಕಲ್ ಮಹಿಳಾ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಫೆಬ್ರವರಿ 17ರಂದು ಬೆಳಗ್ಗೆ 10ಕ್ಕೆ ಹೊಸಪೇಟೆ ನಗರದ ಹಂಪಿ ರಸ್ತೆಯ ಶ್ರೀಮತಿ ಉಗಮದೇವಿ ಭವರ್‍ಲಾಲ್ ನಾಹರ್ ಥಿಯೋಸಾಫಿಕಲ್ ಮಹಿಳಾ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ.

District Level Job Fair In Vijayanagara On February 17

ಉದ್ಯೋಗ ಮೇಳದಲ್ಲಿ ಸುಮಾರು 15ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ. ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್ ಕಾರ್ಡ್ ಪ್ರತಿ ಮತ್ತು 10 ಸ್ವ-ವಿವರ ಪ್ರತಿಗಳೊಂದಿಗೆ ಭಾಗವಹಿಸಬಹುದು.

ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ, ಬಿಇಡಿ, ಬಿಎಸ್ಸಿ ನರ್ಸಿಂಗ್ (ಎಎನ್‍ಎಂ, ಜಿಎನ್‍ಎಂ) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ತಾಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 9886545955, 7892971984, 9091692898, 8904213400.

ಪರೀಕ್ಷಾ ತರಬೇತಿಗೆ ಅರ್ಜಿ ಹಾಕಿ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ (ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಆಯೋಜನೆ ಮಾಡಲಾಗಿದೆ.

ಆಸಕ್ತರು ಫೆಬ್ರವರಿ, 15ರೊಳಗೆ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಆಸಕ್ತರು ಹೆಚ್ಚಿನ ವಿವರಗಳಿಗೆ 0821-2515944/ 9964760090 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ. ಕೆ. ಎಲ್. ಎನ್. ಮೂರ್ತಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+