ಮಾರ್ಚ್ 15ರಂದು ದಾವಣಗೆರೆಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ
ದಾವಣಗೆರೆ, ಮಾರ್ಚ್ 05: ದಾವಣಗೆರೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಮಾರ್ಚ್ 15ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.
ಮಾರ್ಚ್ 15ರಂದು ಹದಡಿ ರಸ್ತೆಯಲ್ಲಿನ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 3 ಸಾವಿರ ಉದ್ಯೋಗಗಳ ಭರ್ತಿಗೆ ಗುರಿ ಹೊಂದಲಾಗಿದೆ. ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರು ಭಾಗಿಯಾಗಲು ಸಂಸದರು ಕರೆ ನೀಡಿದ್ದಾರೆ.

ಎಸ್‌ಎಸ್‌ಎಲ್‌ಸಿಯಿಂದ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‍ಗಳನ್ನು ಪಡೆದವರಿಗೆ ವಿವಿಧ ಕಂಪನಿಗಳಿಗೆ ಅವಶ್ಯವಿರುವ 3 ಸಾವಿರ ಹುದ್ದೆಗಳ ಭರ್ತಿಗೆ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಜಿಲ್ಲೆಯ ಯುವಕ, ಯುವತಿಯರು ಇದರ ಲಾಭ ಪಡೆಯಬೇಕು ಎಂದು ಕರೆ ನೀಡಲಾಗಿದೆ. ಉದ್ಯೋಗ ಮೇಳವನ್ನು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಹದಡಿ ರಸ್ತೆಯಲ್ಲಿನ ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದೆ.
ದಾವಣಗೆರೆ ನಗರ ಜವಳಿ ಕ್ಷೇತ್ರದಲ್ಲಿ ಪ್ರಸಿದ್ಧಿಯನ್ನು ಪಡೆಯುವ ಮೂಲಕ ಮ್ಯಾಂಚೆಸ್ಟರ್ ಎಂದೇ ಹೆಸರುಗಳಿಸಿತ್ತು. ಈಗ ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಪಡೆದಿದೆ. ದಾವಣಗೆರೆ ಐಟಿಐನಿಂದ ಡಿಪ್ಲೋಮಾ, ಇಂಜಿನಿಯರಿಂಗ್, ಮೆಡಿಕಲ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಹೊಂದಿದೆ. ಜೊತೆಗೆ ಕೃಷಿಯಲ್ಲಿಯು ಜಿಲ್ಲೆ ಸಾಕಷ್ಟು ಅಭಿವೃದ್ದಿ ಹೊಂದಿದೆ.
ಉನ್ನತ ಶಿಕ್ಷಣ ಪಡೆದವರು ಉದ್ಯೋಗಕ್ಕಾಗಿ ಹೊರ ದೇಶಗಳಿಗೆ ಹೋಗಲಿದ್ದು ಇಲ್ಲಿನ ಮಾನವ ಸಂಪನ್ಮೂಲ ಬೇರೆ ಕಡೆ ಬಳಕೆಯಾಗುವ ಬದಲು ಇಲ್ಲಿಯೇ ಬಳಕೆಯಾಗುವುದರಿಂದ ಇನ್ನಷ್ಟು ಅಭಿವೃದ್ದಿ ಹೊಂದಲು ಸಾಧ್ಯವಾಗಲಿದೆ. ಇಂತಹ ಬೃಹತ್ ಉದ್ಯೋಗ ಮೇಳಗಳ ಮೂಲಕ ಜಿಲ್ಲೆಯ ಯುವಕ, ಯುವತಿಯರಿಗೆ ಅನುಕೂಲವಾಗಲಿದೆ.
ಮಾರ್ಚ್ 8ರಂದು ಉದ್ಯೋಗ ಮೇಳ: ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್‌ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳವನ್ನು ಕೊಡಗು ಜಿಲ್ಲೆಯಲ್ಲಿ ಮಾರ್ಚ್ 8ರಂದು ಆಯೋಜನೆ ಮಾಡಲಾಗಿದೆ.
ಕೊಡಗು ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಗುರಿಯೊಂದಿಗೆ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಬೆಳಗ್ಗೆ 10ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆದ್ದರಿಂದ ಜಿಲ್ಲೆಯ 18ರಿಂದ 35ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಲಾಗಿದೆ.
ಯುವನಿಧಿ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿರುವ ಕರ್ನಾಟಕ ಸರ್ಕಾರ ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವಂತೆ ಮಾಡಲು ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತಿದೆ.
ಅಲ್ಲದೇ ವಿವಿಧ ಕೈಗಾರಿಕೆಗಳು, ಕಂಪನಿಗಳು, ವಿದೇಶಿ ವಿವಿಗಳೊಂದಿಗೆ ವಿವಿಧ ಉದ್ದೇಶಗಳಿಗೆ ಸುಮಾರು 20 ಒಡಂಬಡಿಕೆಗಳನ್ನು ಮಾಡಿಕೊಂಡಿದ್ದೇವೆ. ಮುಂದುವರೆದ ಭಾಗವಾಗಿ ವಿಶ್ವಬ್ಯಾಂಕ್ ನೆರವಿನಲ್ಲಿ ರಾಜ್ಯದ ಏಳೆಂಟು ಕಡೆ ಸೆಂಟರ್ಸ್ ಆಫ್ ಎಕ್ಸಲೆನ್ಸ್ ಸ್ಥಾಪಿಸುವ ಮಹತ್ವದ ಯೋಜನೆ ರೂಪಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಹೇಳಿದ್ದಾರೆ.












Click it and Unblock the Notifications