ದಾವಣಗೆರೆ ವೈದ್ಯರ ನೇಮಕಾತಿಗೆ ನೇರ ಸಂದರ್ಶನ
ದಾವಣಗೆರೆ, ಏಪ್ರಿಲ್ 23: ದಾವಣಗೆರೆ ಜಿಲ್ಲೆಯಲ್ಲಿ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ಹಾಗೂ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ಎಂ. ಬಿ. ಬಿ. ಎಸ್ ವೈದ್ಯರನ್ನು ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಲಾಗುತ್ತದೆ.
ಜಿಲ್ಲೆಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 9 ಹುದ್ದೆಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಏ.24 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಏ.23 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ದಾವಣಗೆರೆ ಇಲ್ಲಿಗೆ ಹಾಜರಾಗಿ ಸಂಬಂಧಪಟ್ಟ ವಿಭಾಗದಲ್ಲಿ ವಿದ್ಯಾರ್ಹತೆಯ ಅರ್ಹತಾ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿ, ಅರ್ಹತಾ ದಾಖಲೆಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.
ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗಳನ್ನು ಬಲಪಡಿಸಿ ಸಮರ್ಪಕ ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ.












Click it and Unblock the Notifications