ಆಯುಷ್ ವೈದ್ಯಾಧಿಕಾರಿ, ಬೋಧಕ ಸಿಬ್ಬಂದಿಗೆ ಸಚಿವರ ಅಭಯ

ಬೆಂಗಳೂರು, ಆಗಸ್ಟ್ 13 : ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಆಯುಷ್ ವೈದ್ಯಾಧಿಕಾರಿಗಳು ಮತ್ತು ಬೋಧಕ ಸಿಬ್ಬಂದಿಗೆ ಆರೋಗ್ಯ ಸಚಿವರು ಅಭಯ ನೀಡಿದ್ದಾರೆ. ಯಾರೂ ಸಹ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಗುರುವಾರ ಆರೋಗ್ಯ ಸಚಿವ ಬಿ. ಶ್ರೀರಾಮುಲು ಈ ಕುರಿತು ಟ್ವೀಟ್ ಮಾಡಿದ್ದಾರೆ. ಆಯುಷ್ ವೈದ್ಯಾಧಿಕಾರಿಗಳು ಮತ್ತು ಬೋಧಕ ಸಿಬ್ಬಂದಿ ನೇಮಕಾತಿಗಾಗಿ ಲೋಕಸೇವಾ ಆಯೋಗದಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಆಯುಷ್ ವೈದ್ಯರು ಮತ್ತು ಬೋಧಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ. ಆದ್ದರಿಂದ ಆರೋಗ್ಯ ಸಚಿವರು ಈ ಕುರಿತು ಟ್ವೀಟ್ ಮಾಡಿದ್ದಾರೆ.

Dont Panic Minister Tweet For Ayush Doctor And Teaching Staff

"ನೇರ ನೇಮಕಾತಿಗೆ ಪ್ರಯತ್ನ ಮಾಡುತ್ತಿದ್ದು, ಈ ಕುರಿತು ಸಭೆ ನಡೆಸಿ ಮಾಹಿತಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದು ಸಚಿವರು ಹೇಳಿದ್ದಾರೆ. ಕೋವಿಡ್ ಸೋಂಕಿತರಾಗಿರುವ ಸಚಿವರು ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

"ನಮ್ಮ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರಿಗೆ ಯಾವುದೇ ರೀತಿಯಲ್ಲೂ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು. ಆಯುಷ್ ವೈದ್ಯರು ಮತ್ತು ಬೋಧಕ ಸಿಬ್ಬಂದಿ ಆತಂಕಗೊಳ್ಳುವ ಅಗತ್ಯವಿಲ್ಲ" ಎಂದು ಸಚಿವರು ಅಭಯ ನೀಡಿದ್ದಾರೆ.

ಹುದ್ದೆಗಳು ಖಾಲಿ ಇದ್ದ ಸಂದರ್ಭದಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಈಗ ಲೋಕಸೇವಾ ಆಯೋಗದಿಂದ ನೇರ ನೇಮಕಾತಿ ನಡೆದರೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡವರು ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂಬುದು ಆತಂಕವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+