ಬೆಂಗಳೂರು : ದೂರದರ್ಶನ ಕೇಂದ್ರದಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಸೆಪ್ಟೆಂಬರ್ 30 : ಬೆಂಗಳೂರು ದೂರದರ್ಶನ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 26, 2015.
ಸಹಾಯಕ ಸುದ್ದಿ ಸಂಪಾದಕ, ನಿರ್ಮಾಪಕ, ಕಾಪಿ ಎಡಿಟರ್, ವರದಿಗಾರ, ಸಹಾಯಕ ಜಾಲತಾಣ ಸಂಪಾದಕ, ಜಾಲತಾಣ ಸಹಾಯಕ, ನಿರ್ಮಾಣ ಸಹಾಯಕ, ಪೋಸ್ಟ್ ಪ್ರೊಡಕ್ಷನ್ ಅಸಿಸ್ಟೆಂಟ್, ವೀಡಿಯೊ ಸಂಪಾದಕ, ಕ್ಯಾಮರಾಮನ್, ಡಾಟಾ ಎಂಟ್ರಿ ಆಪರೇಟರ್, ಸಿ.ಜಿ. ಆಪರೇಟರ್, ಕ್ಯಾಮೆರಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. [ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ]

ಈ ಹುದ್ದೆಗಳು ಹಂಗಾಮಿಯಾಗಿವೆ. ಅರ್ಹತೆ ಮಾನದಂಡ, ಶೈಕ್ಷಣಿಕ ಹಿನ್ನೆಲೆ, ಅನುಭವ ಮುಂತಾದ ವಿವರಗಳಿಗಾಗಿ www.ddchandana.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. [ಉತ್ತರ ಕನ್ನಡದಲ್ಲಿ ಕೆಲಸ ಖಾಲಿ ಇದೆ]
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನ್ನಡ ಭಾಷಾಜ್ಞಾನ ಹೊಂದಿರಬೇಕು. ಇಂಗ್ಲೀಷ್, ಹಿಂದಿ ಹಾಗೂ ಕಂಪ್ಯೂಟರ್ ಜ್ಞಾನ ಕೂಡ ಹೊಂದಿದ್ದರೆ ಉತ್ತಮ.
ತರಬೇತಿಗೆ ಅರ್ಜಿ ಆಹ್ವಾನ : ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣ ಪಂಚಾಯತ್ ವತಿಯಿಂದ ಯಲಬುರ್ಗಾ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ನಿರುದ್ಯೋಗಿಗಳಿಗೆ ಲಘುವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಅರ್ಜಿಗಳನ್ನು ಯಲಬುರ್ಗಾ ಪಟ್ಟಣ ಪಂಚಾಯತ್ ಕಾರ್ಯಾಲಯದ ವಿಷಯ ನಿರ್ವಾಹಕರಿಂದ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಮತದಾರರ ಭಾವಚಿತ್ರ ಇರುವ ಗುರುತಿನ ಚೀಟಿ ಅಥವಾ ಆಧಾರ್‍ಕಾರ್ಡ್, ಒಂದು ಭಾವಚಿತ್ರ ಇತ್ಯಾದಿ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಲಗತ್ತಿಸಿ ಸಲ್ಲಿಸಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ವಿಷಯ ನಿರ್ವಾಹಕರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯಲಬುರ್ಗಾ ಪಟ್ಟಣ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications