• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೆಪಿಎಸ್‌ಸಿ 1998 ನೇಮಕಾತಿ ಅಕ್ರಮ; ಪರಿಷ್ಕೃತ ಪಟ್ಟಿ ಪ್ರಕಟ

|

ಬೆಂಗಳೂರು, ಡಿಸೆಂಬರ್ 01 : 1998ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಸಂಬಂಧ ಪರಿಷ್ಕರಣೆ ಮಾಡಿರುವ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಮೂಲಕ ಕೆಪಿಎಸ್ ನೇಮಕಾತಿ ಪ್ರಕ್ರಿಯೆಲ್ಲಿ ನಡೆದಿದ್ದ ಅಕ್ರಮವನ್ನು ಸರಿಪಡಿಸಿಕೊಳ್ಳಲು ಮುಂದಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಪರಿಷ್ಕರಣೆ ಪಟ್ಟಿಯನ್ನು ಹೊರಡಿಸಿದೆ. ಇದರಿಂದಾಗಿ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ 107 ಅಧಿಕಾರಿಗಳ ಸ್ಥಾನಪಲ್ಲಟವಾಗುತ್ತಿದೆ.

ಕೆಪಿಎಸ್‌ಸಿ ನೇಮಕಾತಿ ವಿವಾದ; 36 ಅಧಿಕಾರಿಗಳ ಕೆಲಸಕ್ಕೆ ಕತ್ತರಿ!

ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳನ್ನು ಹಾಲಿ ಹುದ್ದೆಯಿಂದ ತಕ್ಷಣ ಬಿಡುಗಡೆ ಮಾಡುವಂತೆ ಡಿಪಿಎಆರ್ ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದೆ. 13 ವರ್ಷಗಳ ಬಳಿಕ ಅಧಿಕಾರಿಗಳ ಸ್ಥಾನಪಲ್ಲಟವಾಗಲಿದೆ.

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶ್ಯಾಂ ಭಟ್‌ಗೆ ಬಂಧನ ಭೀತಿ

ಪರಿಷ್ಕರಣೆ ಮಾಡಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿರುವ ಅಧಿಕಾರಿಗಳ ಪೈಕಿ ಕರ್ತವ್ಯಕ್ಕೆ ಸೇರಿದವರು, ಮರಣ ಹೊಂದಿದವರು, ವಜಾಗೊಂಡವರು, ರಾಜೀನಾಮೆ ಹಾಗೂ ಕಡ್ಡಾಯ ನಿವೃತ್ತಿ ಹೊಂದಿದವರು ಇದ್ದರೆ ಆಯಾ ನೇಮಕಾತಿ ಪ್ರಾಧಿಕಾರಗಳು ಆ ಮಾಹಿತಿಯನ್ನು ದೃಢೀಕರಿಸಿ ನೀಡಬೇಕು ಎಂದು ಡಿಪಿಎಆರ್ ತಿಳಿಸಿದೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ 18 ಸಾವಿರ ಉದ್ಯೋಗ ಕಡಿತ

ಕರ್ನಾಟಕ ಹೈಕೋರ್ಟ್ ಆದೇಶ

ಕರ್ನಾಟಕ ಹೈಕೋರ್ಟ್ ಆದೇಶ

ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದ ಅನ್ವಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. 2016 ಜೂನ್ 21ರಂದು ನ್ಯಾಯಾಲಯ ಕೆಪಿಎಸ್‌ಸಿ ಅಕ್ರಮ ನೇಮಕಾತಿ ಕುರಿತ ಅರ್ಜಿ ವಿಚಾರಣೆ ನಡೆಸಿ ಆದೇಶ ನೀಡಿತ್ತು. 1998ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ 383 ಹುದ್ದೆಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮೂಲ ಆಯ್ಕೆ ಪಟ್ಟಿಯಲ್ಲಿರುವ 107 ಅಧಿಕಾರಿಗಳ ಹುದ್ದೆಗಳು ಬದಲಾಗಲಿವೆ.

ಹುದ್ದೆ ಕಳೆದುಕೊಳ್ಳಲಿದ್ದಾರೆ

ಹುದ್ದೆ ಕಳೆದುಕೊಳ್ಳಲಿದ್ದಾರೆ

ಪರಿಷ್ಕೃತ ಪಟ್ಟಿ ಪ್ರಕಾರ 36 ಅಧಿಕಾರಿಗಳು ಹುದ್ದೆ ಕಳೆದುಕೊಳ್ಳಲಿದ್ದಾರೆ. ಅಧಿಕಾರಿಗಳನ್ನು ಕೈ ಬಿಡುವ ಕುರಿತು ವೇತನ, ಭವಿಷ್ಯ ನಿಧಿ ಮತ್ತು ಇತರ ನಿವೃತ್ತಿ ಸೌಲಭ್ಯಗಳನ್ನು ಯಾವ ರೀತಿ ಪರಿಗಣಿಸಬೇಕು ಎಂಬ ಬಗ್ಗೆ ಆರ್ಥಿಕ ಇಲಾಖೆ, ಕಾನೂನು ಇಲಾಖೆ ಮತ್ತು ಡಿಪಿಎಆರ್‌ನಿಂದ ಅಭಿಪ್ರಾಯ ಪಡೆಯಲು ಸರ್ಕಾರ ತೀರ್ಮಾನಿಸಿದೆ.

ಅನರ್ಹರನ್ನು ಕೈ ಬಿಡಿ

ಅನರ್ಹರನ್ನು ಕೈ ಬಿಡಿ

1998ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ದೂರು ದಾಖಲಾಗಿತ್ತು. ದೂರಿನ ಕುರಿತು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಅನರ್ಹರನ್ನು ಕೈ ಬಿಟ್ಟು ಅರ್ಹರಿಗೆ ನೇಮಕಾತಿ ಆದೇಶ ನೀಡಿ ಎಂದು ಸೂಚನೆ ನೀಡಿತ್ತು. ಪ್ರಕರಣದ ಸುಪ್ರೀಂಕೋರ್ಟ್ ಅಂಗಳವನ್ನು ತಲುಪಿತ್ತು. ನ್ಯಾಯಾಲಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು. ಈ ಕುರಿತು ದಾಖಲಾಗಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿತ್ತು.

ಕೆಪಿಎಸ್‌ಸಿ ನೇಮಕಾತಿ

ಕೆಪಿಎಸ್‌ಸಿ ನೇಮಕಾತಿ

ಕರ್ನಾಟಕ ಲೋಕಸೇವಾ ಆಯೋಗ 1998ರ ಫೆಬ್ರವರಿಯಲ್ಲಿ 383 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿತ್ತು. ಆಗಸ್ಟ್‌ನಲ್ಲಿ ಪ್ರಾಥಮಿಕ ಪರೀಕ್ಷೆ ನಡೆದು 1999ರ ಏಪ್ರಿಲ್‌ನಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. 2000ದ ಜನವರಿಯಲ್ಲಿ ವ್ಯಕ್ತಿತ್ವ ಸಂದರ್ಶನ ನಡೆದು, 2001ರ ಸೆಪ್ಟೆಂಬರ್‌ನಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿತ್ತು. ಬಳಿಕ ಮೌಲ್ಯ ಮಾಪನದಲ್ಲಿ ಅಕ್ರಮ ನಡೆದಿದೆ ಎಂದು ವಿವಾದ ಕೆಎಟಿ ಮೆಟ್ಟಿಲೇರಿತ್ತು.

English summary
Department of Personnel and Administrative Services (DPAR) released the final list of Karnataka Public Service Commission selection list 1998. Various officer's posting will change according to list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X