ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

36 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ಭರ್ತಿಗೆ ಅಧಿಸೂಚನೆ

|
Google Oneindia Kannada News

ಬೆಂಗಳೂರು, ಜೂನ್ 22 : ಕರ್ನಾಟಕ ಸರ್ಕಾರ 36,261 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಆಕ್ಷೇಪಣೆಗಳನ್ನು ಸ್ವೀಕಾರ ಮಾಡಿದ ಬಳಿಕ ನೇಮಕಾತಿಗೆ ಅಂತಿಮ ಅಧಿಸೂಚನೆ ಪ್ರಕಟವಾಗಲಿದೆ.

ಕರ್ನಾಟಕ ರಾಜ್ಯ ಪೊಲೀಸ್ ಮಿನಿಸ್ಟೆರಿಯಲ್ ಸರ್ವೀಸಸ್ (ನೇಮಕಾತಿ) (ತಿದ್ದುಪಡಿ) ನಿಯಮಗಳು 2020. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ನಿಯಮಗಳು 1978ರ ಅಡಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ.

ಪೊಲೀಸ್ ಇಲಾಖೆ ನೇಮಕಾತಿ; ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ ಪೊಲೀಸ್ ಇಲಾಖೆ ನೇಮಕಾತಿ; ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಒಟ್ಟು 36,361 ಹುದ್ದೆಗಳ ಭರ್ತಿಗೆ ಕರಡು ಅಧಿಸೂಚನೆ ಪ್ರಕಟವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 23,500 ರಿಂದ 47,650 ರೂ. ವೇತನ ನಿಗದಿ ಮಾಡಲಾಗಿದೆ. ಪುರುಷ, ಮಹಿಳಾ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಕೆಪಿಎಸ್‌ಸಿ ನೇಮಕಾತಿ; ಮುಖ್ಯ ಪರೀಕ್ಷೆಯ ಅಂಕಗಳು ಇಳಿಕೆಕೆಪಿಎಸ್‌ಸಿ ನೇಮಕಾತಿ; ಮುಖ್ಯ ಪರೀಕ್ಷೆಯ ಅಂಕಗಳು ಇಳಿಕೆ

ಈ ಅಧಿಸೂಚನೆ ಬಗ್ಗೆ ಆಕ್ಷೇಪಣೆಗಳು ಇದ್ದರೆ 15 ದಿನದಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ವಿಳಾಸ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ, ವಿಧಾನಸೌಧ, ಬೆಂಗಳೂರು 560001.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ; ಕರ್ನಾಟಕದಲ್ಲಿ ಕೆಲಸ ಬ್ಯಾಂಕ್ ಆಫ್ ಬರೋಡಾ ನೇಮಕಾತಿ; ಕರ್ನಾಟಕದಲ್ಲಿ ಕೆಲಸ

ಪೊಲೀಸ್ ಕಾನ್ಸ್‌ಟೇಬಲ್ ನೇರ ನೇಮಕಾತಿ

ಪೊಲೀಸ್ ಕಾನ್ಸ್‌ಟೇಬಲ್ ನೇರ ನೇಮಕಾತಿ

ನೇರ ನೇಮಕಾತಿ ಮೂಲಕ ಶೇ 67.50ರಷ್ಟು ಪುರುಷ, ಶೇ 22.50ಯಷ್ಟು ಮಹಿಳಾ, ಶೇ 10ರಷ್ಟು ಈಗಾಗಲೇ ಸೇವೆಯಲ್ಲಿರುವ ಸಿಎಆರ್ ಅಥವ ಡಿಎಆರ್ ಅಥವ ಕೆಎಸ್ಆರ್‌ಪಿ ಅಥವ ಕೆಎಸ್‌ಐಎಸ್‌ಎಫ್ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.

ವಿದ್ಯಾರ್ಹತೆ ಏನು?

ವಿದ್ಯಾರ್ಹತೆ ಏನು?

ಒಟ್ಟು 36,261 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಯೋಮಿತಿಯ ವಿವರಗಳು

ವಯೋಮಿತಿಯ ವಿವರಗಳು

ಕನಿಷ್ಠ 19 ವರ್ಷ ಪೂರೈಸಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 27 ವರ್ಷ ಮೀರದ ಎಸ್‌ಸಿ/ಎಸ್‌ಟಿ, 25 ವರ್ಷ ಮೀರದ ಇತರೆ ವರ್ಗದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಯ್ಕೆ ಪಟ್ಟಿ ಪ್ರಕಟ

ಆಯ್ಕೆ ಪಟ್ಟಿ ಪ್ರಕಟ

ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳ ದೈಹಿಕ ಸಾಮರ್ಥ್ಯ ಪರೀಕ್ಷೆ, ಸಹಿಷ್ಣುತಾ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಹೆಸರು ಇರುವ ಅಭ್ಯರ್ಥಿಗಳನ್ನು ಮೂಲ ದಾಖಲೆಗಳ ಪರಿಶೀಲನೆಗೆ ಕರೆದು ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

English summary
Karnataka government issued draft notification for the 36,261 police constable recruitment. People can submit objections before 15 days of the notification.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X