DRDO DYSL-AI Recruitment 2023: ಬೆಂಗಳೂರಿನಲ್ಲೇ ಕೈತುಂಬ ಸಂಬಳದ ಕೆಲಸ ಖಾಲಿ ಇದೆ
ಬೆಂಗಳೂರು, ಸೆಪ್ಟಂಬರ್ 21: ಡಿಆರ್‌ಡಿಓ ಯಂಗ್ ಸೈಂಟಿಸ್ಟ್ ಲ್ಯಾಬೋರೇಟರಿ-ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಡಿಫೆನ್ಸ್ ರಿಸರ್ಚ್ ಆಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (DRDO DYSL-AI) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಪಡೆಯಲು ಇದೊಂದು ಉತ್ತಮ ಅವಕಾಶವಾಗಿದೆ.
DRDO DYSL-AI ಖಾಲಿ ಹುದ್ದೆಗಳ ನೇಮಕಕ್ಕೆ ಅರ್ಹರಿಂದ ಅರ್ಜಿಗನ್ನು ಆಹ್ವಾನಿಸಿದೆ. ಒಟ್ಟು 2 ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗಳು ಖಾಲಿ ಇದ್ದು, ಅರ್ಹರು ಅಕ್ಟೋಬರ್ 10ರೊಳಗೆ ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುವುದು.

ನೇಮಕಾತಿ ಪೂರ್ಣ ವಿವರ
ಸಂಸ್ಥೆ ಹೆಸರು: DRDO DYSL-AI
ಹುದ್ದೆ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಖಾಲಿ ಹುದ್ದೆ ಸಂಖ್ಯೆ: 2
ಮಾಸಿಕ ವೇತನ: 37,000 ನಿಂದ 46,990 ರೂಪಾಯಿ
ಅರ್ಜಿ ಸಲ್ಲಿಕೆ ಕೊನೆ ದಿನ: ಅಕ್ಟೋಬರ್ 10, 2023
ವಿದ್ಯಾರ್ಹತೆ ಏನಿರಬೇಕು
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಪದವಿ, ಎಂಇ/ಎಂ.ಟೆಕ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆ ತಿಳಿಸಿದೆ.
ವಯೋಮಿತಿ
ಇನ್ನೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ನಿಗದಿ ಮಾಡಲಾಗಿದೆ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಅಂದರೆ ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳು- 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ ಎಂದು ಸಂಸ್ಥೆ ಹೇಳಿದೆ.

ಆಯ್ಕೆ ಪ್ರಕ್ರಿಯೆ ಮಾಹಿತಿ
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಮೊದಲ ಲಿಖಿತ ಪರೀಕ್ಷೆ ಎದುರಿಸಬೇಕಾಗುತ್ತದೆ. ನಂತರ ಸಂದರ್ಶನದಲ್ಲಿ ಪಾಲ್ಗೊಂಡು ಆಯ್ಕೆ ಆಗಬಹುದಾಗಿದೆ. ಇನ್ನೂ ಸೂಕ್ತ ದಾಖಲೆಗಳ ಸಹಿತಿ ಭರ್ತಿ ಮಾಡಿದ ಅರ್ಜಿಯನ್ನು ಅರ್ಹರು '' ನಿರ್ದೇಶಕರು
DRDO ಯಂಗ್ ಸೈಂಟಿಸ್ಟ್ ಲ್ಯಾಬ್-ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಡಾ. ರಾಜಾ ರಾಮಣ್ಣ ಕಾಂಪ್ಲೆಕ್ಸ್, ರಾಜಭವನ ಸರ್ಕಲ್
ಹೈಗ್ರೌಂಡ್ಸ್, ಬೆಂಗಳೂರು 560001ಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗೆ ಮತ್ತು ಅರ್ಜಿ ಸಾಫ್ಟ್ ಕಾಪಿಯನ್ನು ಇ-ಮೇಲ್ ಐಡಿ [email protected] ಗೆ ಅಕ್ಟೋಬರ್ 10ರೊಳಗೆ ಕಳುಹಿಸಬೇಕು ಎಂದು ತಿಳಿಸಿದೆ.












Click it and Unblock the Notifications