DRDO Recruitment 2024: ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ, ವೇತನ, ಆಯ್ಕೆ ಮಾಹಿತಿ ಇಲ್ಲಿದೆ
ಬೆಂಗಳೂರು, ಜನವರಿ 23: ರಿಸರ್ಚ್ ಮತ್ತು ಡೆವಲಪ್‌ಮೆಂಟ್ ಆರ್ಗನೈಸೇಶನ್ (DRDO) ಯಂಗ್ ಸೈಂಟಿಸ್ಟ್ ಲ್ಯಾಬೋರೇಟರಿ-ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದೆ.
ರಿಸರ್ಚ್ ಮತ್ತು ಡೆವಲಪ್‌ಮೆಂಟ್ ಆರ್ಗನೈಸೇಶನ್ (DRDO) ನಲ್ಲಿ ಒಟ್ಟು 2 ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗಳು ಖಾಲಿ ಇದೆ. ಇದಕ್ಕೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಸೇರಬಯಸುವವರು ಈ ಅವಕಾಶ ಸದುಪಯೋಗ ಮಾಡಿಕೊಳ್ಳಬೇಕಿದೆ. ಆಸಕ್ತರು ಫೆಬ್ರವರಿ 7 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಮೊದಲು ಅಧಿಸೂಚನೆ ಓದಿಕೊಳ್ಳಿ, ಜತೆಗೆ ಇಲ್ಲಿ ನೀಡಲಾಗಿರುವ ಮಾಹಿತಿ ತಿಳಿದು ಅರ್ಜಿ ಸಲ್ಲಿಸಿ.

ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಡಿಆರ್‌ಡಿಒ ಯಂಗ್ ಸೈಂಟಿಸ್ಟ್ ಲ್ಯಾಬೋರೇಟರಿ-ಆರ್ಟಿಫಿಶಿಯಲ್ ಇಂಟೆಲಿಜೆನ್ಸ್
ಹುದ್ದೆ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಖಾಲಿ ಹುದ್ದೆ: 2
ಮಾಸಿಕ ವೇತನ: 37,000 ರಿಂದ 46,990 ರೂಪಾಯಿ
ಪೋಸ್ಟಿಂಗ್: ಬೆಂಗಳೂರು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಫೆಬ್ರವರಿ 7
ವಿದ್ಯಾರ್ಹತೆ ಏನಿರಬೇಕು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಪದವಿ, ಎಂಇ/ಎಂ.ಟೆಕ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವುದನ್ನು ಕಡ್ಡಾಯಗೊಳಿಸಲಾಗಿದೆ.
ವಯೋಮಿತಿ ವಿವರ
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು ಎಂದು ತಿಳಿಸಿದೆ. ಇದರೊಂದಿಗೆ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಸಿಗಲಿದೆ. ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಐದು ವರ್ಷ, ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗುವುದು ಎಂದು ಡಿಆರ್‌ಡಿಓ ಮಾಹಿತಿ ನೀಡಿದೆ.

ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಗೇಟ್ ಸ್ಕೋರ್ ನಡೆಸಿ ನಂತರ ಆನ್ಲೈನ್ ಕೋಡಿಂಗ್ ಪರೀಕ್ಷೆ ನಡೆಸಲಾಗುವುದು. ಅದರಲ್ಲಿ ಉತ್ತೀರ್ಣ ಆಗುವವರಿಗೆ ಸಂಸ್ಥೆಯು ಮತ್ತೆ ನೇರ ಸಂದರ್ಶನ ನಡೆಸಲಿದೆ. ಇಲ್ಲಿ ಆಯ್ಕೆ ಆಗುವವರಿಗೆ ಮಾಸಿಕ ₹ 37,000- 46,990 ವರೆಗೆ ವೇತನ ಸಹಿತ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.
ಆಫ್‌ಲೈನ್ ಅರ್ಜಿ ಸಲ್ಲಿಕೆ ವಿಳಾಸ
ಸೂಕ್ತ ದಾಖಲೆಗಳ ಸಹಿತ ಭರ್ತಿ ಮಾಡಿದ ಅರ್ಜಿಯನ್ನು ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ' ನಿರ್ದೇಶಕರು,
DRDO ಯಂಗ್ ಸೈಂಟಿಸ್ಟ್ ಲ್ಯಾಬ್-ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಡಾ. ರಾಜಾ ರಾಮಣ್ಣ ಕಾಂಪ್ಲೆಕ್ಸ್, ರಾಜಭವನ ಸರ್ಕಲ್
ಹೈಗ್ರೌಂಡ್ಸ್, ಬೆಂಗಳೂರು-560001'' ಇಲ್ಲಿಗೆ ಸಲ್ಲಿಸಬೇಕಿದೆ.
ನೆನಪಿಡಬೇಕಾದ ದಿನಾಂಕ
ಅರ್ಜಿ ಸಲ್ಲಿಕೆ ಆರಂಭ ದಿನ- ಜನವರಿ 17
ಅರ್ಜಿ ಸಲ್ಲಿಕೆ ಕಡೆಯ ದಿನಾಂಕ- ಫೆಬ್ರವರಿ 7











Click it and Unblock the Notifications