15 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಡಿಆರ್‌ಡಿಒ
ಬೆಂಗಳೂರು, ನವೆಂಬರ್ 26 : ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) 15 ಸಂಶೋಧಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 30, 2018 ಕೊನೆಯ ದಿನವಾಗಿದೆ.
ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಸಂಶೋಧಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೊದಲ ದರ್ಜೆಯಲ್ಲಿ ಬ್ಯಾಚುಲರ್ ಡಿಗ್ರಿಯನ್ನು ಇಂಜಿನಿಯರಿಂಗ್‌ನಲ್ಲಿ ಪಡೆದಿರಬೇಕು. ಕಂಪ್ಯೂಟರ್ ಸೈನ್ಸ್, ಇನ್‌ಫರ್‌ಮೇಶನ್ ಸೈನ್ಸ್‌ನಲ್ಲಿ ಪದವಿ ಪಡೆದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸೈಟಿಂಸ್ಟ್ ಡಿ/ಇ 45 ವರ್ಷ, ಸೈಂಟಿಸ್ಟ್ ಸಿ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ನವೆಂಬರ್ 30, 2018ಕ್ಕೆ ಅನ್ವಯವಾಗುವಂತೆ.
ವೇತನ ಶ್ರೇಣಿಯ ವಿವರ
* ಸೈಂಟಿಸ್ಟ್ ಇ : 123100 ಪ್ರತಿ ತಿಂಗಳು
* ಸೈಂಟಿಸ್ಟ್ ಡಿ : 77800 ಪ್ರತಿ ತಿಂಗಳು
* ಸೈಂಟಿಸ್ಟ್ ಸಿ : 67700 ಪ್ರತಿ ತಿಂಗಳು
ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಮಾಡಿಲ್ಲ. ಇತರ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.
ವಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications