Get Updates
Get notified of breaking news, exclusive insights, and must-see stories!

494 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಡಿಆರ್‌ಡಿಓ

ಬೆಂಗಳೂರು, ಆಗಸ್ಟ್ 10 : ಡಿಆರ್‌ಡಿಓ 494 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 29, 2018 ಕೊನೆಯ ದಿನವಾಗಿದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) 494 ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಬಿ (STA B) (ಮೆಕಾನಿಕಲ್ ಇಂಜಿನಿಯರ್) : 140. ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಬಿ (STA B) (ಫಿಸಿಕ್ಸ್) 16 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

DRDO recruitment 2018 : Apply for 494 Senior Technical Assistant Posts

ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಬಿ (STA B) ಹುದ್ದೆಗೆ ಅರ್ಜಿ ಸಲ್ಲಿಸುವವರು ಮೂರು ವರ್ಷದ ಮೆಕಾನಿಕಲ್ ಇಂಜಿನಿಯರ್ ಡಿಪ್ಲೊಮಾ ಪದವಿ ಪಡೆದಿರಬೇಕು. ಮೆಕಾನಿಕಲ್ ಇಂಜಿನಿಯರಿಂಗ್‌ (ಪ್ರೊಡಕ್ಷನ್, ಆಟೋ ಮೊಬೈಲ್, ಏರಿ ಕಂಡೀಷನ್, ಮೈಂಟೆನೆನ್ಸ್‌) ನಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಪಡೆದಿರಬೇಕು.

ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಬಿ (STA B) ಹುದ್ದೆಗೆ ಅರ್ಜಿ ಹಾಕುವವರು ಬಿಎಸ್‌ಸಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. (ಪಿಸಿಎಂ/ಪಿಸಿಬಿ) ಅಧ್ಯಯನ ಮಾಡಿದವರು ಅರ್ಜಿ ಹಾಕಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ವೇತನ ಶ್ರೇಣಿ 50 ಸಾವಿರ ರೂ. ಪ್ರತಿ ತಿಂಗಳು.

ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಇತರ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+