ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

494 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಡಿಆರ್‌ಡಿಓ

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 10 : ಡಿಆರ್‌ಡಿಓ 494 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 29, 2018 ಕೊನೆಯ ದಿನವಾಗಿದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) 494 ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ದಾವಣಗೆರೆಯಲ್ಲಿ 25 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನದಾವಣಗೆರೆಯಲ್ಲಿ 25 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಬಿ (STA B) (ಮೆಕಾನಿಕಲ್ ಇಂಜಿನಿಯರ್) : 140. ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಬಿ (STA B) (ಫಿಸಿಕ್ಸ್) 16 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

DRDO recruitment 2018 : Apply for 494 Senior Technical Assistant Posts

ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಬಿ (STA B) ಹುದ್ದೆಗೆ ಅರ್ಜಿ ಸಲ್ಲಿಸುವವರು ಮೂರು ವರ್ಷದ ಮೆಕಾನಿಕಲ್ ಇಂಜಿನಿಯರ್ ಡಿಪ್ಲೊಮಾ ಪದವಿ ಪಡೆದಿರಬೇಕು. ಮೆಕಾನಿಕಲ್ ಇಂಜಿನಿಯರಿಂಗ್‌ (ಪ್ರೊಡಕ್ಷನ್, ಆಟೋ ಮೊಬೈಲ್, ಏರಿ ಕಂಡೀಷನ್, ಮೈಂಟೆನೆನ್ಸ್‌) ನಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಪಡೆದಿರಬೇಕು.

11 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಹೆಚ್‌ಪಿಸಿಎಲ್ 11 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಹೆಚ್‌ಪಿಸಿಎಲ್

ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಬಿ (STA B) ಹುದ್ದೆಗೆ ಅರ್ಜಿ ಹಾಕುವವರು ಬಿಎಸ್‌ಸಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. (ಪಿಸಿಎಂ/ಪಿಸಿಬಿ) ಅಧ್ಯಯನ ಮಾಡಿದವರು ಅರ್ಜಿ ಹಾಕಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ವೇತನ ಶ್ರೇಣಿ 50 ಸಾವಿರ ರೂ. ಪ್ರತಿ ತಿಂಗಳು.

ಚಿಕ್ಕಮಗಳೂರಿನಲ್ಲಿ 45 ಗ್ರಾಮ ಲೆಕ್ಕಿಗ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಚಿಕ್ಕಮಗಳೂರಿನಲ್ಲಿ 45 ಗ್ರಾಮ ಲೆಕ್ಕಿಗ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಇತರ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

English summary
Defence Research and Development Organization (DRDO) recruitment 2018-19. Notification has been released on official website for the recruitment of 494 vacancies. The candidate who is looking for Senior Technical Assistant can apply online application before 29th August 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X