ಡಿಆರ್‌ಡಿಒದಲ್ಲಿ ತಾಂತ್ರಿಕ ಅಪ್ರೆಂಟಿಸ್ ಉದ್ಯೋಗಾವಕಾಶಗಳಿವೆ
ನವದೆಹಲಿ, ನವೆಂಬರ್ 28: ಡಿಫೆನ್ಸ್ ರಿಸರ್ಚ್ ಅಂಡ್ ಡೆವಲ್ ಪೆಂಟ್ ಆರ್ಗನೈಜೇಷನ್(ಡಿಆರ್‌ಡಿಒ) 2021ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದೆ. ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ವಿಡಿಯೋ ಮೂಲಕ ಸಂದರ್ಶನಕ್ಕೆ ಹಾಜರಾಗಬಹುದು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ಡಿಸೆಂಬರ್ 14, 2021 ಕೊನೆ ದಿನಾಂಕವಾಗಿದೆ.
ಸಂಸ್ಥೆ ಹೆಸರು: Defence Research and Development Organisation
ಒಟ್ಟು ಹುದ್ದೆ: Graduate Apprenticeship,Diploma Apprentice
ಉದ್ಯೋಗ ಸ್ಥಳ; ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಡಿಸೆಂಬರ್ 14, 2021
ಒಟ್ಟು ಹುದ್ದೆಗಳ ಸಂಖ್ಯೆ: 12
ಸಂಬಳ ನಿರೀಕ್ಷೆ: 9,000 ರು ಪ್ರತಿ ತಿಂಗಳು(ಬಿ.ಇ), 8,000 ರು ಪ್ರತಿ ತಿಂಗಳು(ಡಿಪ್ಲೋಮಾ)
ಹುದ್ದೆ ವಿವರ:
ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್: 02 ಹುದ್ದೆ
ಮೆಡಿಕಲ್ ಲ್ಯಾಬರೋಟರಿ ತಂತ್ರಜ್ಞಾನ: 04
ಲೈಬ್ರರಿ ಸೈನ್ಸ್: 01
ಮೆಕ್ಯಾನಿಕಲ್ ಇಂಜಿನಿಯರಿಂಗ್: 01
ಮಾರ್ಡ್ರನ್ ಆಫೀಸ್ ಪ್ರಾಕ್ಟೀಸ್/ಕಚೇರಿ ನಿರ್ವಾಹಣೆ: 04
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಮೆಡಿಕಲ್ ಲ್ಯಾಬರೋಟರಿ ಟೆಕ್ನಾಲಜಿ, ಲೈಬ್ರರಿ ಸೈನ್ಸ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಮಾರ್ಡ್ರನ್ ಆಫೀಸ್ ಪ್ರಾಕ್ಟೀಸ್, ಕಚೇರಿ ನಿರ್ವಹಣೆ ಸಂಬಂಧಿಸಿದ ವಿಷಯದಲ್ಲಿ ವ್ಯಾಸಂಗ ಮಾಡಿರತಕ್ಕದ್ದು.
ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ, ಅಥವಾ ಬಿ.ಟೆಕ್. ಕಂಪ್ಯೂಟರ್ ಸೈನ್ಸ್, ಮಾಹಿತಿ ವಿಜ್ಞಾನ ಹಾಗೂ ತಂತ್ರಜ್ಞಾನ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ಕಮ್ಯೂನಿಕೇಷನ್, ಇನ್ಸ್ರ್ಟೂಮೆಂಟೇಷನ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್

ವಯೋಮಿತಿ: ನೋಟಿಫಿಕೇಷನ್ ದಿನಾಂಕಕ್ಕೆ ಅನ್ವಯವಾಗುವಂತೆ 18 ರಿಂದ 28 ವರ್ಷ. ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆ ಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ಹಾಗೂ 1984ರ ಗಲಭೆ ಪೀಡಿತರು ಮತ್ತು ಮಾಜಿ ಯೋಧರಿಗೆ 5 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ.
ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಎರಡು ಸುತ್ತಿನ ಫಲಿತಾಂಶ, ಮೆರಿಟ್ ಆಧಾರದ ಮೇಲೆ ಆದ್ಯತೆಯಂತೆ ಆಯ್ಕೆ.
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿ ಯೋಧ, ಮಹಿಳೆ: ಯಾವುದೇ ಶುಲ್ಕವಿಲ್ಲ.
ಇತರೆ: 100 ರು.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆಯ್ಕೆ ದಿನಾಂಕ: 15/11/2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14/12/2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ : http://rac.gov.in or http://drdo.gov.in. ಅಧಿಕೃತ ವೆಬ್ ತಾಣದಲ್ಲಿ ಬಂದಿರುವ ನೋಟಿಫಿಕೇಷನ್ ಓದಿಕೊಳ್ಳಿ. ನಂತರ
ಅರ್ಜಿ ಸಲ್ಲಿಸುವ ವಿಧಾನ:
* ಆಯಿಲ್ ಇಂಡಿಯಾ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಮಾನವ ಸಂಪನ್ಮೂಲ ಇಲಾಖೆಯ ವೆಬ್ ತಾಣ(http://mhrdnats.gov.in)ದಲ್ಲಿ ನೋಂದಣಿ ಮಾಡಿಕೊಳ್ಳಿ.
* ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ತಾಂತ್ರಿಕ/ ತಾಂತ್ರಿಕೇತರ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ DRDO ಇಂಡಿಯಾ ಅಧಿಕೃತ ವೆಬ್ ತಾಣವನ್ನು ನೋಡಬಹುದು.












Click it and Unblock the Notifications