ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಭ್ಯರ್ಥಿಗಳಿಗೆ ಸೂಚನೆ; ಕೆಎಸ್ಆರ್‌ಟಿಸಿಯ ನೇಮಕಾತಿ ತಾತ್ಕಾಲಿಕ ಸ್ಥಗಿತ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 21 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಕಟಣೆ ಮೂಲಕ ಅಭ್ಯರ್ಥಿಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದೆ.

ಬುಧವಾರ ಕೆಎಸ್ಆರ್‌ಟಿಸಿ ಈ ಕುರಿತು ಟ್ವೀಟ್ ಮಾಡಿದೆ. 17/3/2020ರಂದು ನೀಡಿದ್ದ ಜಾಹೀರಾತು ಅನ್ವಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಕೆಪಿಎಸ್‌ಸಿ ಅಧಿಸೂಚನೆ; ಅರಣ್ಯ ಇಲಾಖೆ ನೇಮಕಾತಿಗೆ ಅರ್ಜಿ ಹಾಕಿ ಕೆಪಿಎಸ್‌ಸಿ ಅಧಿಸೂಚನೆ; ಅರಣ್ಯ ಇಲಾಖೆ ನೇಮಕಾತಿಗೆ ಅರ್ಜಿ ಹಾಕಿ

Due To COVID KSRTC Stopped Recruitment Temporarily

12/6/2018ರಲ್ಲಿ ನೀಡಿದ್ದ ಜಾಹೀರಾತು ಅನ್ವಯ ಅಭ್ಯರ್ಥಿಗಳಿಂದ ಭದ್ರತಾ ರಕ್ಷಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿತ್ತು.

ಕೋಲಾರ; ಖಾಸಗಿ ಕಂಪನಿಗಳಲ್ಲಿ 5000 ನೇಮಕಾತಿ ಕೋಲಾರ; ಖಾಸಗಿ ಕಂಪನಿಗಳಲ್ಲಿ 5000 ನೇಮಕಾತಿ

14/2/2020ರಲ್ಲಿ ನೀಡಿದ್ದ ಜಾಹೀರಾತು ಅನ್ವಯ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೋವಿಡ್ -19 ಹಿನ್ನಲೆಯಲ್ಲಿ ಸ್ಥಗಿತಗೊಳಿಸಲಾಗಿದೆ.

SSC ನೇಮಕಾತಿ 2020: ವಿವಿಧ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ SSC ನೇಮಕಾತಿ 2020: ವಿವಿಧ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾರಿಗೆ ಕಾರ್ಯಾಚರಣೆ ವ್ಯತ್ಯಯ ಉಂಟಾಗಿರುವ ಕಾರಣ ಮುಂದಿನ ಆದೇಶದ ತನಕ ನೇಮಕಾತಿ ಸ್ಥಗಿತಗೊಳಿಸಲಾಗಿರುತ್ತದೆ. ನೇಮಕಾತಿ ಆರಂಭವಾದ ಬಳಿಕ ವೆಬ್ ಸೈಟ್‌ನಲ್ಲಿ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿಯನ್ನ ತಾತ್ಕಾಲಿಕವಾಗಿ ತಡೆ ಹಿಡಿದಿದೆ. ಡಿಸೆಂಬರ್ ಬಳಿಕ ನೇಮಕಾತಿಯನ್ನು ಪುನಃ ಆರಂಭಿಸುವ ನಿರೀಕ್ಷೆ ಇದೆ.

ನಿಗಮಗಳಲ್ಲಿ ಕೆಲಸ ಕೊಡಿಸುವುದಾಗಿ ಮಧ್ಯವರ್ತಿಗಳು ಸಂಪರ್ಕ ಮಾಡಿದರೆ ಹಣವನ್ನು ನೀಡಿ ಅಭ್ಯರ್ಥಿಗಳು ಮೋಸ ಹೋಗಬಾರದು ಎಂದು ಮನವಿ ಮಾಡಲಾಗಿದೆ. ವೆಬ್‌ಸೈಟ್‌ನಲ್ಲಿ ನೇಮಕಾತಿ ಕುರಿತು ಅಧಿಕೃತ ಮಾಹಿತಿಯನ್ನು ನೀಡಲಾಗುತ್ತದೆ.

English summary
In a tweet Karnataka State Road Transport Corporation ( KSRTC ) said that recruitment of Drivers and Driver cum Conductors post stopped Temporarily due to COVID pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X