ಕಲಬುರಗಿ ನ್ಯಾಯಾಲಯದಲ್ಲಿ 33 ಹುದ್ದೆಗಳು ಖಾಲಿ ಇವೆ

ಬೆಂಗಳೂರು, ನವೆಂಬರ್ 07 : ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 5/12/2018 ಕೊನೆಯ ದಿನವಾಗಿದೆ.

ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ, ಬೆರಳಚ್ಚುಗಾರ, ನಕಲು ಬೆರಳಚ್ಚುಗಾರ, ಆದೇಶ ಜಾರಿಕಾರ ಮತ್ತು ಸೇವಕರ ಹುದ್ದೆ ಸೇರಿಸಿ ಒಟ್ಟು 33 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಶೀಘ್ರಲಿಪಿಗಾರ 12, ಬೆರಳಚ್ಚುಗಾರ 05, ನಕಲು ಬೆರಳಚ್ಚುಗಾರ 05, ಆದೇಶ ಜಾರಿಕಾರ 03 ಮತ್ತು ಸೇವಕರ (Peon) 08 ಹುದ್ದೆಗಳಿವೆ. ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿಯಲ್ಲಿ ಕೆಲಸ ಮಾಡಬೇಕಿದೆ.

E court recruitment : Apply for 33 various posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 2ಎ/2ಬಿ/3ಎ/2ಬಿ ಅಭ್ಯರ್ಥಿಗಳಿಗೆ 18 ರಿಂದ 38 ವರ್ಷಗಳು. ಇತರ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷಗಳು.

ಅರ್ಜಿ ಸಲ್ಲಿಕೆ ಹೇಗೆ? : ಆನ್‌ಲೈನ್‌ನಲ್ಲಿ ಸಿಗುವ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಸ್ವಂತ ಕೈ ಬರಹದಿಂದ ಎಲ್ಲಾ ಅಂಕಣಗಳನ್ನು ಜಾಗರೂಕತೆಯಿಂದ ಭರ್ತಿ ಮಾಡಿ 5/12/2018ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವಾಗ ಸಂಬಂಧಿತ ಹುದ್ದೆಯ ಲಕೋಟೆಯ ಮೇಲೆ ಕಡ್ಡಾಯವಾಗಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೇವೆ ಎಂದು ದಪ್ಪ ಅಕ್ಷರಗಳಲ್ಲಿ ಬರೆದಿರಬೇಕು.

ಅರ್ಜಿ ಸಲ್ಲಿಸಲು ವಿಳಾಸ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಕಲಬುರಗಿ 585102 ವಿಳಾಸಕ್ಕೆ ಕಳಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+