ಪೂರ್ವ ರೈಲ್ವೆ ನೇಮಕಾತಿ : 310 ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಏಪ್ರಿಲ್ 22 : ಪೂರ್ವ ರೈಲ್ವೆ 310 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲು 14/5/2019 ಕೊನೆಯ ದಿನವಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಪೂರ್ವ ರೈಲ್ವೆ ಜ್ಯೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಟೆಕ್ನಿಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಮೆಟ್ರಿಕ್ಯುಲೇಷನ್ ಪೂರ್ಣಗೊಳಿಸಿವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 12ನೇ ತರಗತಿ ಪಾಸ್, ಪದವಿ, ಡಿಪ್ಲೊಮಾ, ಬಿಎಸ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 42 ವರ್ಷ, ಓಬಿಸಿ 45 ವರ್ಷ, ಎಸ್‌ಸಿ/ಎಸ್‌ಟಿ 47 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಮಾಡಿಲ್ಲ.
ಅಭ್ಯರ್ಥಿಗಳನ್ನು ಕಂಪ್ಯೂಟರ್ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications