ಪೂರ್ವ ರೈಲ್ವೆ ನೇಮಕಾತಿ 252 ಹುದ್ದೆ, ದ್ವಿತೀಯ ಪಿಯುಸಿ ವಿದ್ಯಾರ್ಹತೆ
ಬೆಂಗಳೂರು, ಸೆಪ್ಟೆಂಬರ್ 03 : ಪೂರ್ವ ರೈಲ್ವೆ 252 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 1/10/2019 ಕೊನೆಯ ದಿನವಾಗಿದೆ.
ಪೂರ್ವ ರೈಲ್ವೆ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಜ್ಯೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.
12ನೇ ತರಗತಿ ಉತ್ತಿರ್ಣಗೊಂಡ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ, ಟೈಪಿಂಗ್ ಪರೀಕ್ಷೆ, ದಾಖಲಾತಿಗಳ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 42, ಎಸ್‌ಸಿ/ಎಸ್‌ಟಿ 47 ಮತ್ತು ಓಬಿಸಿಯವರಿಗೆ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಪ್ರಮುಖ ಮಾಹಿತಿಗಳು
* ಪೂರ್ವ ರೈಲ್ವೇಯಲ್ಲಿ ಕೆಲಸ
* ಕಮರ್ಷಿಯಲ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್, ಜ್ಯೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳು
* ದೇಶದ ಯಾವುದೇ ನಗರದಲ್ಲಿ ಕೆಲಸ
* 1/10/2019 ಅರ್ಜಿ ಹಾಕಲು ಕೊನೆ ದಿನ
10/9/2019ರಿಂದ 1/10/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications