ಪೂರ್ವ ರೈಲ್ವೆಯಲ್ಲಿ ಕೆಲಸ ಖಾಲಿ ಇದೆ; 2792 ಹುದ್ದೆಗಳು
ಬೆಂಗಳೂರು, ಜನವರಿ 29 : ಪೂರ್ವ ರೈಲ್ವೆ 2792 ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 13/3/2020 ಕೊನೆಯ ದಿನವಾಗಿದೆ.
ಪೂರ್ವ ರೈಲ್ವೆ 2792 Act Apprentice ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಥವ 10+2 ಕ್ಕಿಂತ ಕಡಿಮೆ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳು ವಿದ್ಯಾರ್ಹತೆಯನ್ನು ಶೇ 50ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್‌ನಿಂದ ಪಡೆದಿರಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 15 ರಿಂದ 24 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ. (ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ).
ಮೆರಿಟ್ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 14/2/2020 ರಿಂದ 13/3/2020ರ ತನಕ ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಇತರ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.
ಅರ್ಜಿಗಳನ್ನು ಸಲ್ಲಿಸುವವರು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications