ಇಸಿಐಎಲ್ ನೇಮಕಾತಿ, ಚಿಕ್ಕಬಳ್ಳಾಪುರದಲ್ಲಿ ಕೆಲಸ
ಬೆಂಗಳೂರು, ಜೂನ್ 12 : ಇಸಿಐಎಲ್ 10 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹತಾ ಪರೀಕ್ಷೆ ಜೂನ್ 17, 2018ರಂದು ಬೆಳಗ್ಗೆ 9ಕ್ಕೆ ನಡೆಯಲಿದೆ.
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಟೆಕ್ನಿಕಲ್ ಅಸಿಸ್ಟೆಂಟ್, ಸೈಂಟಿಸ್ಟ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಕೆಲಸ ನಿರ್ವಹಿಸಬೇಕು. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. 17,498 ರೂ. ವೇತನ ಶ್ರೇಣಿ ನಿಗದಿ ಮಾಡಲಾಗಿದೆ.

ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, ಇಂಜಿನಿಯರಿಂಗ್ ನಲ್ಲಿ ಶೇ 60ರಷ್ಟು ಅಂಕಗಳನ್ನು ಪಡೆದು ಮಾನ್ಯತೆ ಪಡೆದ ಸಂಸ್ಥೆಯಿಂದ ಉತ್ತೀರ್ಣರಾಗಿರಬೇಕು.
ಸೈಂಟಿಸ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್‌ಸಿ ಗಣಿತ/ಫಿಸಿಕ್ಸ್/ಕೆಮಿಸ್ಟ್ರಿ ಶೇ 60ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 31 ಮೇ 2018ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications