14 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಸಿಐಎಲ್

ಬೆಂಗಳೂರು, ಜೂನ್ 27 : ಇಸಿಐಎಲ್ 14 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 4 ಜುಲೈ 2018ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಡೆಪ್ಯೂಟಿ ಜನರಲ್ ಮ್ಯಾನೇಜರ್, ಅಕೌಂಟ್ಸ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 14 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಡೆಪ್ಯೂಟಿ ಜನರಲ್ ಮ್ಯಾನೇಜರ್ (ಮಾರ್ಕೆಟಿಂಗ್) : 4, ಅಕೌಂಟ್ ಮ್ಯಾನೇಜರ್ : 2 ಸೇರಿದಂತೆ 14 ಹುದ್ದೆಗನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ECIL recruitment 2018 : Apply for 14 Various Vacancies

ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ 32,900-580000, ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ 24900-50500 ರೂ. ವೇತನ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ : ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾರ್ಕೆಟಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.ಇಂಜಿನಿಯರಿಂಗ್ ವಿಭಾಗದಲ್ಲಿ ಅನುಭವ ಹೊಂದಿರಬೇಕು. ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಸಿಎ/ICWA ವ್ಯಾಸಂಗ ಮಾಡಿರಬೇಕು.

ವಯೋಮಿತಿ : ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆ 45 ವರ್ಷಗಳು. ಅಕೌಂಟ್ ಮ್ಯಾನೇಜರ್ ಹುದ್ದೆಗೆ 40 ವರ್ಷಗಳ ವಯೋಮಿತಿ ನಿಗದಿ ಪಡಿಸಲಾಗಿದೆ. 31 ಮೇ 2018ಕ್ಕೆ ಅನ್ವಯವಾಗುವಂತೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ/ನಿವೃತ್ತ ಯೋಧರಿಗೆ ಯಾವುದೇ ಶುಲ್ಕವಿರುವುದಿಲ್ಲ. ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+