400 ಹುದ್ದೆಗಳ ಭರ್ತಿಗೆ ಇಸಿಐಎಲ್‌ನಲ್ಲಿ ನೇರ ಸಂದರ್ಶನ
ಬೆಂಗಳೂರು, ನವೆಂಬರ್ 05 : ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಲಿಮಿಟೆಡ್ 400 ವಿವಿಧ ಹುದ್ದೆಗಳ ಭರ್ತಿ ಮಾಡಲಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 6 ರಿಂದ 10ರ ತನಕ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಇಸಿಐಎಲ್ ಜ್ಯೂನಿಯರ್ ಟೆಕ್ನಿಕಲ್ ಆಫೀಸರ್, ಜ್ಯೂನಿಯರ್ ಕನ್ಸಲ್ಟೆಂಟ್ ಫೀಲ್ಡ್ ಆಪರೇಷನ್ ಸೇರಿದಂತೆ 400 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಜ್ಯೂನಿಯರ್ ಟೆಕ್ನಿಕಲ್ ಆಫೀಸರ್ ಹುದ್ದೆಗೆ ಎಲೆಕ್ಟ್ರಾನಿಕ್ಸ್&ಕಮ್ಯುನಿಕೇಷನ್/ಮೆಕಾನಿಕಲ್/ಎಲೆಕ್ಟ್ರಾನಿಕ್ಸ್/ Instrumentation/ಎಲೆಕ್ಟ್ರಿಕಲ್&ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ಸೈನ್ಸ್,/ Information Technology ಯಲ್ಲಿ ಶೇ 60ಕ್ಕಿಂತ ಹೆಚ್ಚಿನ ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಉತ್ತೀರ್ಣರಾಗಿರಬೇಕು.

ಜ್ಯೂನಿಯರ್ ಕನ್ಸಲ್ಟೆಂಟ್ ಫೀಲ್ಡ್ ಆಪರೇಷನ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎರಡು ವರ್ಷದ ಐಟಿಐ ಪೂರ್ಣಗೊಳಿಸಿರಬೇಕು. (ಎಲೆಕ್ಟ್ರಾನಿಕ್ಸ್ ಮೆಷಿನ್/ಆರ್&ಟಿವಿ/ಎಲೆಕ್ಟ್ರಿಕಲ್&ಫಿಟ್ಟರ್).
ವಯೋಮಿತಿ : ಜ್ಯೂನಿಯರ್ ಟೆಕ್ನಿಕಲ್ ಆಫೀಸರ್ ಹುದ್ದೆಗೆ 30 ವರ್ಷಗಳ ವಯೋಮಿತಿ, ಜ್ಯೂನಿಯರ್ ಕನ್ಸಲ್ಟೆಂಟ್ ಫೀಲ್ಡ್ ಆಪರೇಷನ್ ಹುದ್ದೆಗೆ 28 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಸೆಪ್ಟೆಂಬರ್ 30 2018ಕ್ಕೆ ಅನ್ವಯವಾಗುವಂತೆ.
ಜ್ಯೂನಿಯರ್ ಟೆಕ್ನಿಕಲ್ ಆಫೀಸರ್ ಹುದ್ದೆಗೆ 19188 ರೂ. ವೇತನ, ಜ್ಯೂನಿಯರ್ ಕನ್ಸಲ್ಟೆಂಟ್ ಫೀಲ್ಡ್ ಆಪರೇಷನ್ ಹುದ್ದೆಗೆ 16042 ರೂ. ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications