ECIL Recruitment 2023: ಕೇಂದ್ರ ಸರ್ಕಾರಿ ಉದ್ಯೋಗ, ಕೈತುಂಬ ಸಂಬಳ, ಆ.11ಕ್ಕೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ
ಬೆಂಗಳೂರು, ಆಗಸ್ಟ್ 09: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರ ವ್ಯಾಪ್ತಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ತನ್ನಲ್ಲಿ ಖಾಲಿ ಇರುವ ಒಟ್ಟು 100 ತಾಂತ್ರಿಕ ಅಧಿಕಾರಿಗಳ (Technical Officer) ಹುದ್ದೆಗಳು ಖಾಲಿ ಇವೆ. ಆಸಕ್ತರು ಇದೇ ಆಗಸ್ಟ್ 11ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸ್ಥೆ ತಿಳಿಸಿದೆ.

ಅರ್ಜಿ ಸಲ್ಲಿಕೆಗೂ ಮೊದಲು ನೇಮಕಾತಿ ಕುರಿತ ಪೂರ್ಣ ಮಾಹಿತಿ, ವಯೋಮಿತಿ ಸೇರಿದಂತೆ ಇನ್ನಿತರ ಅಂಶಗಳನ್ನು ತಿಳಿದುಕೊಳ್ಳಬೇಕು ಎಂದು ಸಂಸ್ಥೆ ತಿಳಿಸಿದೆ.
ಶೈಕ್ಷಣಿಕ ಅರ್ಹತೆ ಏನಿರಬೇಕು?
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ,
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯದಲ್ಲಿ CSE/IT/ECE/EEE/ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಪದವಿ ಪಡೆದಿರಬೇಕು ಎಂದು ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯೋಮಿತಿ- ವೇತನ ಮಾಹಿತಿ
ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿಬಾರದು. ಹುದ್ದೆಗೆ ಆಯ್ಕೆಯಾಗುವವರಿಗೆ ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 25,000-31,000 ರೂಪಾಯಿ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇನ್ನೂ ವಯೋಮಿತಿ ಸಡಿಲಿಕೆಯ ವಿವರ ನೋಡಿವುದಾದರೆ, OBC ಅಭ್ಯರ್ಥಿಗಳು- 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಆಯ್ಕೆಯಾಗುವ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿಯಾದರೂ ಪೊಸ್ಟಿಂಗ್ ನೀಡದರೂ ಕೆಲಸ ಮಾಡಲು ಸಿದ್ಧರಿರಬೇಕು. ಅಧಿಸೂಚನೆ ಹಾಗೂ ಇನ್ನಿತರ ಮಾಹಿತಿಗೆ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ecil.co.inಗೆ ಭೇಟಿ ಕೊಡಬಹುದಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ
ಹುದ್ದೆಗಳಿಗೆ ಅಭ್ಯರ್ಥಿಗಳ ವಿದ್ಯಾರ್ಹತೆ (ಕ್ವಾಲಿಫಿಕೇಶನ್) ಕೆಲಸದ ಅನುಭವ ಹಾಗೂ ದಾಖಲೆ ಪರಿಶೀಲಿಸಿ ಸಂದರ್ಶನ ನಡೆಸಿ ಆಯ್ಕೆ ಮಾಲಡಾಗುತ್ತದೆ.
ಆಸಕ್ತರು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸೂಕ್ತ ದಾಖಲೆಗಳ ಸಹಿತಿ 'ಕಾರ್ಪೊರೇಟ್ ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ, ನಳಂದಾ ಕಾಂಪ್ಲೆಕ್ಸ್, TIFR ರಸ್ತೆ, ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್, ECIL ಪೋಸ್ಟ್ ಹೈದರಾಬಾದ್ - 500062 ವಿಳಾಸಕ್ಕೆ ಸಲ್ಲಿಸಬಹುದು.












Click it and Unblock the Notifications