10,611 ಸರ್ಕಾರಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಮಾರ್ಚ್ 06 : ಕರ್ನಾಟಕ ಸರ್ಕಾರ 10,611 ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲಿದೆ. ಬುಧವಾರ ಈ ಕುರಿತ ಅಧಿಸೂಚನೆಯನ್ನು ಪ್ರಾಥಮಿಕ ಶಿಕ್ಷಣ ಇಲಾಖೆ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಪಿ.ಸಿ.ಜಾಫರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದಕ್ಕಾಗಿ ಮೇ 18 ರಿಂದ ಸ್ಮರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ' ಎಂದು ಹೇಳಿದ್ದಾರೆ.

2018-19ನೇ ಸಾಲಿನಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ (6 ರಿಂದ 8 ನೇತರಗತಿ) ಶಿಕ್ಷಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಬುಧವಾರ ಯಾವ ಜಿಲ್ಲೆಗಳಲ್ಲಿ ಎಷ್ಟು ಹುದ್ದೆಗಳಿಗೆ ಎಂಬ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಮಾರ್ಚ್ 11 ರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 10, 2019 ಕೊನೆಯ ದಿನವಾಗಿದೆ.... ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆನ್‌ಲೈನ್ ಮೂಲಕ ಅರ್ಜಿ

ಆನ್‌ಲೈನ್ ಮೂಲಕ ಅರ್ಜಿ

ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಇತರೆ ಯಾವುದೇ ವಿಧಾನದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳು

ಸ್ಪರ್ಧಾತ್ಮಕ ಪರೀಕ್ಷೆಗಳು

1ನೇ ಪರೀಕ್ಷೆ ಹೈದ್ರಾಬಾದ್-ಕರ್ನಾಟಕ ಪ್ರದೇಶದ ಜಿಲ್ಲೆಗಳ ಶೇ80ರಷ್ಟು ಸ್ಥಳೀಯ ವೃಂದದ ಮತ್ತು ಬೆಂಗಳೂರು ಬಿಬಿಎಂಪಿ ಪ್ರದೇಶದ ವ್ಯಾಪ್ತಿಯ ಶಾಲೆಗಳ ಶೇ 8ರಷ್ಟು ರಾಜ್ಯ ಮಟ್ಟದ ಸ್ಥಳೀಯ ವೃಂದದ ಹುದ್ದೆಗಳಿಗೆ ಮೇ 18 ಮತ್ತು 19ರಂದು ಪರೀಕ್ಷೆ ನಡೆಯಲಿದೆ.

ಪರೀಕ್ಷಾ ದಿನಾಂಕ 2

ಪರೀಕ್ಷಾ ದಿನಾಂಕ 2

2ನೇ ಪರೀಕ್ಷೆ ಹೈದ್ರಾಬಾದ್-ಕರ್ನಾಟಕ ಪ್ರದೇಶದ ಜಿಲ್ಲೆಗಳ ಶೇ20, ಬೆಂಗಳೂರು ಬಿಬಿಎಂಪಿ ಪ್ರದೇಶದ ವ್ಯಾಪ್ತಿಯ ಶಾಲೆಗಳ ಶೇ 92ರ ವಿಕ್ಕುಳಿದ ವೃಂದದ ಮತ್ತು ಇತರೆ ಜಿಲ್ಲೆಗಳ ಶೇ 100ರಷ್ಟು ಹುದ್ದೆಗಳಿಗೆ ಕ್ರಮವಾಗಿ ಮೇ 25 ಮತ್ತು 26ರಂದು ಪರೀಕ್ಷೆಗಳು ನಡೆಯಲಿವೆ.

ಅಭ್ಯರ್ಥಿಗಳಿಗೆ ಸೂಚನೆ

ಅಭ್ಯರ್ಥಿಗಳಿಗೆ ಸೂಚನೆ

10,611 ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮಾರ್ಚ್ 11 ರಿಂದ ಕೇಂದ್ರೀಕೃತ ದಾಖಲಾತಿ ಘಟಕದ ವೆಬ್‌ಸೈಟ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 10ಕೊನೆಯ ದಿನಾಂಕವಾಗಿದೆ.

ವೆಬ್‌ಸೈಟ್‌ ವಿಳಾಸ

ವೆಬ್‌ಸೈಟ್‌ ವಿಳಾಸ

ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ನೇಮಕಾತಿ ಅಧಿಸೂಚನೆಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ, ಅರ್ಜಿ ಸಲ್ಲಿಸುವುದು ಹೇಗೆ?, ವಿದ್ಯಾರ್ಹತೆ ಮುಂತಾದ ಮಾಹಿತಿ ಲಭ್ಯವಿದೆ. ವೆಬ್‌ಸೈಟ್ ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+