79 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಐಎಲ್
ಬೆಂಗಳೂರು, ಜೂನ್ 04 : ಇಂಜಿನಿಯರ್ಸ್ ಇಂಡಿಯಾ ಲಿ. 79 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 20/6/209ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇಂಜಿನಿಯರ್ಸ್ ಇಂಡಿಯಾ ಲಿ. (ಇಐಎಲ್) ಮ್ಯಾಜೇಜ್‌ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್, ಬಿಎಸ್‌ಸಿ ಪದವಿಯನ್ನು ಶೇ 65ರಷ್ಟು ಅಂಕಗಳೊಂದಿಗೆ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25, ಓಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 28, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 30, ಅಂಗವಿಕಲ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 60000 ಮಾಸಿಕ ವೇತನ ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳನ್ನು GATE-2019 ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications