ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಕೆಲಸ ಖಾಲಿ ಇದೆ
ಮೈಸೂರು, ಡಿಸೆಂಬರ್ 18 : ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ (stenographer), ಅಪ್ಪರ್ ಡಿವಿಷನ್ ಕ್ಲರ್ಕ್ ಹಾಗೂ ಬಹುಕಾರ್ಯಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 6, 2016 ಕೊನೆಯ ದಿನ.
ಶೀಘ್ರ ಲಿಪಿಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಕನಿಷ್ಠ 18 ವರ್ಷ, ಗರಿಷ್ಠ 27 ವರ್ಷಗಳು. ಪಿಯುಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಇಂಗ್ಲೀಷ್ ಮತ್ತು ಹಿಂದಿ ಭಾಷೆಯಲ್ಲಿ ಒಂದು ನಿಮಿಷಕ್ಕೆ 80 ಪದಗಳು ಟೈಪಿಂಗ್ ವೇಗ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. [ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಜಲಮಂಡಳಿ]

ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 27 ವರ್ಷ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ವಿಷಯದಲ್ಲಿ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. [ಚಿಕ್ಕಬಳ್ಳಾಪುರ : ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ]
ಬಹುಕಾರ್ಯಕ ಸಿಬ್ಬಂದಿ ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿ 25 ವರ್ಷ. 10ನೇ ತರಗತಿ ತೇರ್ಗಡೆಯಾಗಿರಬೇಕು. ಪ.ಜಾ/ಪ.ಪಂ.ದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸಲು 2016ರ ಜನವರಿ 6 ಕೊನೆಯ ದಿನಾಂಕ. http://www.esickar.gov.in ವೆಬ್‍ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಸಂಪರ್ಕಿಸಿ : ಹೆಚ್ಚಿನ ಮಾಹಿತಿಗಾಗಿ ಉಪಮುಖ್ಯಸ್ಥರು, ವಿಶ್ವವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಮಾನಸಗಂಗೋತ್ರಿ , ಮೈಸೂರು ಇವರನ್ನು ಸಂಪರ್ಕಿಸಬಹುದು.
Englishನಲ್ಲಿ ಓದಿ












Click it and Unblock the Notifications