ಕಲಬುರಗಿ; ಮೇ 18ರಂದು ಮಿನಿ ಉದ್ಯೋಗ ಮೇಳ
ಕಲಬುರಗಿ, ಮೇ 16; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೇ 18ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 21 ರಿಂದ 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಮೇ 18ರ ಗುರುವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆನೀಡಲಾಗುವುದಿಲ್ಲ.

ಯಾವ-ಯಾವ ಹುದ್ದೆಗಳು?; ಕಲಬುರಗಿ ಎಸ್. ಆರ್. ಜೆ. ಗ್ರೂಪ್ ಆಫ್ ಇನ್ಸ್‌ಟಿಟ್ಯೂಷನ್‌ನಲ್ಲಿ ಶಿಕ್ಷಕರ ಹುದ್ದೆಗೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಯಾವುದೇ ಪದವಿ ಮತ್ತು ಬಿ. ಎಡ್. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 35 ವರ್ಷ.
ಎನ್. ಟಿ. ಟಿ. ಎಫ್. ದಲ್ಲಿ ಟಿ. ಒ. ಟಿ (ಟ್ರೈನಿ) ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಡಿಪ್ಲೋಮಾ/ ಬಿಇ/ ಬಿಟೆಕ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಾಗಿರಬೇಕು. ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 25 ವರ್ಷಗಳು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಜೆರಾಕ್ಸ್, ರೆಸ್ಯೂಮ್, ಭಾವಚಿತ್ರ ಹಾಗೂ ಆಧಾರ್ ಕಾರ್ಡ್‍ದೊಂದಿಗೆ ಹಾಜರಾಗಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು ಎಂದು ತಿಳಿಸಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದು.ಕಚೇರಿ ದೂರವಾಣಿ ಸಂಖ್ಯೆ 08472-274846.
ಉಚಿತ ಕೌಶಾಲ್ಯಾಧಾರಿತ ತರಬೇತಿ; ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಕರೆಯಲಾಗಿದೆ. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ ಯುವತಿಯರು ಅರ್ಜಿ ಸಲ್ಲಿಸಬಹುದು. ವಯೋಮತಿ 18 ರಿಂದ 45 ವರ್ಷಗಳು.
ಜೂನ್ ತಿಂಗಳಲ್ಲಿ ಬ್ಯೂಟಿ ಪಾರ್ಲರ್ ತರಬೇತಿ, ಜೂಟ್ ಬ್ಯಾಗ್ ತಯಾರಿಕೆ ಮತ್ತು ಫೋಟೋಗ್ರಾಫಿ & ವಿಡಿಯೋಗ್ರಾಫಿ ಉಚಿತ ತರಬೇತಿ ನಡೆಯಲಿದೆ. ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತ. ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ ನೋಂದಾಯಿಸಲು ಮೇ 20 ಕೊನೆಯ ದಿನ.
ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್ ನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುತ್ತದೆ.
ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 9482188780, 9483485489, 8970145354, 9742438790.
ಸ್ವಯಂ ಉದ್ಯೋಗ ತರಬೇತಿ; ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಕುರಿ ಸಾಕಾಣಿಕೆ ತರಬೇತಿ ನೀಡಲಾಗುತ್ತದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷಗಳು. ಕನಿಷ್ಠ 8ನೇ ತರಗತಿ ವ್ಯಾಸಂಗ ಮಾಡಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಆಸಕ್ತರು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ರೇಷನ್ ಕಾರ್ಡ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಮೂರು ಫೋಟೋ, ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08539-231038.
ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುತ್ತದೆ. ತರಬೇತಿಗಾಗಿ ಮೇ 22ರಂದು ಸಂದರ್ಶನ ನಡೆಯಲಿದ್ದು, ಮೇ 23ರಿಂದ ತರಬೇತಿ ಪ್ರಾರಂಭವಾಗಲಿವೆ.












Click it and Unblock the Notifications