280 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಪಿಎಫ್‌ಓ

ಬೆಂಗಳೂರು, ಮೇ 21 : ಇಪಿಎಫ್‌ಓ 280 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 25/6/2019 ಕೊನೆಯ ದಿನವಾಗಿದೆ.

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್‌ಓ) 280 ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆಯನ್ನು 25 ಜೂನ್ 2019ರೊಳಗೆ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವವವರಿಗೆ 20 ರಿಂದ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳನ್ನು ಪ್ರಾಥಮಿಕ ಪರೀಕ್ಷೆ, ಪ್ರಮುಖ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ/ಇಲಾಖಾ ಅಭ್ಯರ್ಥಿಗಳಿಗೆ 250 ರೂ., ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+