ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮದಲ್ಲಿ ನೇಮಕಾತಿ, ಮಾಹಿತಿ
ಬೆಂಗಳೂರು, ಡಿಸೆಂಬರ್ 01: ಕರ್ನಾಟಕದ ನೌಕರರ ರಾಜ್ಯ ವಿಮಾ ನಿಗಮ (ESIC) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹರು ನೇರವಾಗಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಕರ್ನಾಟಕದ ನೌಕರರ ರಾಜ್ಯ ವಿಮಾ ನಿಗಮ (ESIC)ದಲ್ಲಿ ಒಟ್ಟು 15 ಜೂನಿಯರ್ ರೆಸಿಡೆಂಟ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಅರ್ಜಿ ಕಲಬುರಗಿಯಲ್ಲಿ ಡಿಸಂಬರ್ 12ರಂದು ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಕಲಬುರಗಿಯಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ.

ಅಭ್ಯರ್ಥಿಗಳು ಸಂದರ್ಶನಕ್ಕೆ ಪಾಲ್ಗೊಳ್ಳುವ ಮುನ್ನ ಹುದ್ದೆ ಕುರಿತ ವಿದ್ಯಾರ್ಹತೆ, ಸಂಬಳ, ವಯೋಮಿತಿ ಸೇರಿದಂತೆ ಪೂರ್ಣ ನೇಮಕಾತಿ ಮಾಹಿತಿ ಇಲ್ಲಿ ತಿಳಿಯಿರಿ.
ನೇಮಕಾತಿ ವಿವರ
ಸಂಸ್ಥೆ ಹೆಸರು: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ
ಹುದ್ದೆ ಹೆಸರು: ಜೂನಿಯರ್ ರೆಸಿಡೆಂಟ್
ಖಾಲಿ ಹುದ್ದೆ ಸಂಖ್ಯೆ: 15
ಪೋಸ್ಟಿಂಗ್: ಕಲಬುರಗಿ
ಮಾಸಿಕ ವೇತನ: ₹1,00,307
ಸಂದರ್ಶನ: ಡಿಸೆಂಬರ್ 12
ವಯಸ್ಸಿನ ಮಿತಿ
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳ ವಯಸ್ಸು 2023ರ ಡಿಸೆಂಬರ್ 14ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು ಎಂದು ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ತಿಳಿಸಿದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಲಿಕೆ ಸಿಗಲಿದೆ.

ಪೋಸ್ಟಿಂಗ್-ವೇತನ ವಿವರ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಆಯ್ಕೆ ಆದ ಬಳಿಕ ಅವರಿಗೆ ಮಾಸಿಕ ₹1,00,307 ವೇತನ ನೀಡಲಾಗುವುದು. ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುವುದು.
ಸಂದರ್ಶನವು, ಡಿಸೆಂಬರ್ 12ರಂದು, ESIC ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಕಲಬುರಗಿ ಇಲ್ಲಿ ನಡೆಯಲಿದೆ.












Click it and Unblock the Notifications