ಇಎಸ್‌ಐಸಿಯಲ್ಲಿ 539 ಹುದ್ದೆ ಭರ್ತಿ, ಪದವೀಧರರು ಅರ್ಜಿ ಹಾಕಿ
ಬೆಂಗಳೂರು, ಸೆಪ್ಟೆಂಬರ್ 17 : ಇಎಸ್‌ಐಸಿ 539 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 5 ಅಕ್ಟೋಬರ್ 2018 ಕೊನೆಯ ದಿನವಾಗಿದೆ.
ನೌಕರರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) Social Security Officer/ Manager/ Superintendent ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು.
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 5 ಅಕ್ಟೋಬರ್ 2018ಕ್ಕೆ ಅನ್ವಯವಾಗುವಂತೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 9300-34800 ರೂ. ವೇತನ ಶ್ರೇಣಿ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕದ ವಿವರ : ಎಸ್‌ಸಿ/ಎಸ್‌ಟಿ/ಮಹಿಳೆ/ನಿವೃತ್ತ ಯೋಧರು/ಇಲಾಖೆಯ ನೌಕರರಿಗೆ 250 ರೂ.ಗಳು. ಇತರೆ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ.
ಲಿಖಿತ ಪರೀಕ್ಷೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications