159 ಹುದ್ದೆಗಳಿಗೆ ಅರ್ಜಿ ಕರೆದ ಇಎಸ್‌ಐಸಿ, ಕರ್ನಾಟಕದಲ್ಲಿ ಕೆಲಸ
ಬೆಂಗಳೂರು, ಮಾರ್ಚ್ 04 : ಇಎಸ್‌ಐಸಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 15/4/2019 ಕೊನೆಯ ದಿನವಾಗಿದೆ.
ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ಸ್ಟೆನೋಗ್ರಾಫರ್, ಅಂಡರ್ ಡಿವಿಷನ್ ಕ್ಲರ್ಕ್ ಸೇರಿ 159 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ, ಪದವಿ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಗಳಿಂದ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.

ವಯೋಮಿತಿ ವಿವರ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ಕನಿಷ್ಠ ವಯೋಮಿತಿ ನಿಗದಿ ಪಡಿಸಲಾಗಿದೆ. ಗರಿಷ್ಠ ವಯೋಮಿತಿ 27 ವರ್ಷಗಳು.
ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ 5,200 ರಿಂದ 20,200 ರೂ. ವೇತನವನ್ನು ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕಗಳು : ಸಾಮಾನ್ಯ, ಓಬಿಸಿ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ. ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧ/ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications