ನವೆಂಬರ್ 30ರಂದು ಇಎಸ್‌ಐಸಿಯಲ್ಲಿ ನೇರ ಸಂದರ್ಶನ
ಬೆಂಗಳೂರು, ನವೆಂಬರ್ 27 : ನೌಕರರ ರಾಜ್ಯ ವಿಮಾ ನಿಗಮ ನವೆಂಬರ್ 30ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ. ಆಸಕ್ತರು ಬೆಂಗಳೂರಿನ ರಾಜಾಜಿನಗರದಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಇಎಸ್‌ಐಸಿ ಜ್ಯೂನಿಯರ್ ರೆಸಿಡೆಂಟ್ (ನಾನ್ ಟೀಚಿಂಗ್) ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಒಟ್ಟು ಮೂರು ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.
ನವೆಂಬರ್ 30ರಂದು ಬೆಳಗ್ಗೆ 9.30ರಿಂದ 10.30ರ ತನಕ ನೇರ ಸಂದರ್ಶನ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 85000 ಮಾಸಿಕ ವೇತನ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಎಂಬಿಬಿಎಸ್ ಪದವಿಯನ್ನು ಪಡೆದಿರಬೇಕು. ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 30 ನವೆಂಬರ್ 2020ಕ್ಕೆ ಅನ್ವಯವಾಗುವಂತೆ.
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಅಗತ್ಯ ದಾಖಲೆಗಳ ಜೊತೆ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ವಿಳಾಸ : ESIC Medical College PGIMSR and Model Hospital, Rajajinagar, Bangalore - 560010.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications