KPSC: ಆಗಸ್ಟ್‌ 27ರ ಪೂರ್ವಭಾವಿ ಪರೀಕ್ಷೆ ಹಾಲ್ ಟಿಕೆಟ್‌ನಲ್ಲಿ ಗೊಂದಲ

ಬೆಂಗಳೂರು, ಆಗಸ್ಟ್ 18: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 27ರಂದು ನಡೆಸಲಿದೆ. ಈಗಾಗಲೇ ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್ ಮೂಲಕ ಹಾಲ್‌ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಆದರೆ ಈ ಹಾಲ್‌ಟಿಕೆಟ್‌ನಲ್ಲಿ ಹಲವು ಗೊಂದಲಗಳಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗುತ್ತಿದೆ. ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವರು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

Exam Centre Confusion In KPSC Preliminary Exam Of August 27

ಹಾಲ್ ಟಿಕೆಟ್ ಗೊಂದಲ: ಬಿಜೆಪಿ ನಾಯಕ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಲ್ ಟಿಕೆಟ್ ಗೊಂದಲದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. 'ಕರ್ನಾಟಕ ಲೋಕ ಸೇವಾ ಆಯೋಗ ಆಯೋಜಿಸಿರುವ KAS ಪರೀಕ್ಷೆ ಇದೆ ಆಗಸ್ಟ್ 27 ರಂದು ನಡೆಯಲಿದ್ದು, ಪರೀಕ್ಷಾರ್ಥಿಗಳಿಗೆ ಈಗಾಗಲೇ ಹಾಲ್ ಟಿಕೆಟ್ ಗಳನ್ನು ಅಂತರ್ಜಾಲದಲ್ಲಿ ಅಪ್ಲೋಡ್ ಮಾಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು ಭಾನುವಾರ ನಡೆಯುವುದು ಅಲಿಖಿತ ನಿಯಮ, ಆದರೆ ಈ ಬಾರಿ ಮಂಗಳವಾರ ನಡೆಯಲಿದೆ' ಎಂದು ಹೇಳಿದ್ದಾರೆ.

'ಈಗ ಪರೀಕ್ಷಾರ್ಥಿಗಳಿಗೆ ಹೊಸ ಸಮಸ್ಯೆ ಎದುರಾಗಿದ್ದು, ಪರೀಕ್ಷಾ ಕೇಂದ್ರಗಳನ್ನು ಪರೀಕ್ಷಾರ್ಥಿಗಳು ಇರುವ ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಹಾಕಿದ್ದಾರೆ. ಮೈಸೂರಿನಲ್ಲಿರುವವರಿಗೆ - ಶಿವಮೊಗ್ಗ, ಚಿತ್ರದುರ್ಗದಲ್ಲಿರುವವರಿಗೆ ಮಂಗಳೂರು ಹೀಗೆ ಅವೈಜ್ಞಾನಿಕವಾಗಿ ಸ್ಥಳ ನಿಗದಿ ಮಾಡಿದ್ದಾರೆ. ವಾರದ ದಿನ ರಜೆ ಅಲಭ್ಯತೆ ಇರುವ ಸಮಸ್ಯೆದೊಂದಿಗೆ, ಈಗ ಪರೀಕ್ಷಾರ್ಥಿಗಳು ರಾತ್ರಿ ಪ್ರಯಾಣ ಮಾಡಬೇಕು ಹಾಗೂ ದೂರದೂರುಗಳಿಗೆ ಹೋಗಲು ಅನವಶ್ಯಕ ಖರ್ಚು ವೆಚ್ಚ ಮಾಡಿಕೊಳ್ಳಬೇಕು' ಎಂದು ತಿಳಿಸಿದ್ದಾರೆ.

'ಈ ರೀತಿಯಾದ (ಅ)ವ್ಯವಸ್ಥೆಗೆ ಕಾರಣ ಯಾರು ಹಾಗೂ ಅಭ್ಯರ್ಥಿಗಳ ಸ್ವಂತ ಊರು/ ಜಿಲ್ಲೆ ಬಿಟ್ಟು ನೂರಾರು ಕಿಲೋಮೀಟರ್ ದೂರದಲ್ಲಿರುವ ಕೇಂದ್ರಗಳಿಗೆ ಹಾಕಿರುವುದು ಯಾಕೆ ಎಂಬುದನ್ನು ಲೋಕಸೇವಾ ಆಯೋಗ ಸ್ಪಷ್ಟಪಡಿಸಬೇಕು. ಪರೀಕ್ಷೆ ವರದ ದಿನ ಇರುವುದರಿಂದ ಎರಡು ದಿನ ರಜೆ ಪಡೆದು ಹೋಗುವುದು ಅಥವಾ ರಾತ್ರಿ ಪ್ರಯಾಣ ಮಾಡುವುದು ಅಭ್ಯರ್ಥಿಗಳಿಗೆ ಅನವಶ್ಯಕ ಹೊರೆಯಾಗಲಿದೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವರು ಕೂಡಲೇ ಇದನ್ನು ಸರಿಪಡಿಸಬೇಕು' ಎಂದು ಯತ್ನಾಳ್ ಒತ್ತಾಯಿಸಿದ್ದಾರೆ.

ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 27ರಂದು ಬರೆಯುವ ಅಭ್ಯರ್ಥಿಗಳು ಈಗ ಆನ್‌ಲೈನ್ ಮೂಲಕ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಬಹುದು. https://kpsconline.karnataka.gov.in/Login/Login ವೆಬ್‌ಸೈಟ್‌ಗೆ ಲಾಗಿನ್ ಆಗಿ ಅಲ್ಲಿ ಮೊಬೈಲ್ ಸಂಖ್ಯೆ/ ಇ-ಮೇಲ್ ಐಡಿ ನೀಡಿ, ಪಾಸ್ ವರ್ಡ್ ನಮೂದಿಸಿ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕೆಪಿಎಸ್‌ಸಿಯ ವೇಳಾಪಟ್ಟಿಯಂತೆ ಆಗಸ್ಟ್ 27ರ ಮಂಗಳವಾರ ಎರಡು ಪತ್ರಿಕೆಗಳ ಪರೀಕ್ಷೆಗಳು ಒಂದೇ ದಿನ ನಡೆಯಲಿದೆ. ಬೆಳಗ್ಗೆ 10 ರಿಂದ 12 ಗಂಟೆಯ ತನಕ ಪತ್ರಿಕೆ-1, ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ಪತ್ರಿಕೆ-2ರ ಪರೀಕ್ಷೆಗಳು ನಿಗದಿಯಾಗಿದೆ. ಒಟ್ಟು 384 ಹುದ್ದೆಗಳಿಗೆ 2,10,910 ಅರ್ಜಿಗಳು ಸಲ್ಲಿಕೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+