ಸಹಾಯಕ ಪ್ರಾಧ್ಯಾಪಕರ ಹುದ್ದೆ: ಮಾರ್ಚ್ 12ರಿಂದ ಪರೀಕ್ಷೆ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗುತ್ತಿದೆ.

ಮಾರ್ಚ್ 12ರಿಂದ 16ರವರೆಗೆ ಪರೀಕ್ಷೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಫೆ.28ರಿಂದ http://kea.kar.nic.on ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಬಗ್ಗೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅದು ಕೆಳಕಂಡಂತಿದೆ:

ಮಾರ್ಚ್ 12ರಂದು: ಸಾಮಾನ್ಯ ಜ್ಞಾನ ಕಡ್ಡಾಯ ಪತ್ರಿಕೆ- 50 ಅಂಕ (ಮಧ್ಯಾಹ್ನ 2.30ರಿಂದ 4.30ರವರೆಗೆ)

Exams for selection of Assistant Professors to be from Mar 12

ಮಾರ್ಚ್ 13ರಂದು: ಕಡ್ಡಾಯ ಕನ್ನಡ- 100 ಅಂಕ (ಬೆಳಗ್ಗೆ 10.30ರಿಂದ 12.30ರವರೆಗೆ), ಇಂಗ್ಲಿಷ್ -100 ಅಂಕ (ಮಧ್ಯಾಹ್ನ 2.30ರಿಂದ 4.30ರವರೆಗೆ ಕಡ್ಡಾಯ).

ಮಾರ್ಚ್ 14ರಂದು: ಕನ್ನಡ, ಉರ್ದು, ಸಸ್ಯಶಾಸ್ತ್ರ, ಭೂಗೋಳ ಮತ್ತು ಫ್ಯಾಷನ್ ಟೆಕ್ನಾಲಜಿ, (ಬೆಳಗ್ಗೆ 10ರಿಂದ 1ರವರೆಗೆ ) ರಾಜ್ಯಶಾಸ್ತ್ರ, ಮೈಕ್ರೋಬಯಾಲಜಿ ಮತ್ತು ಭೂಗರ್ಭಶಾಸ್ತ್ರ (ಮಧ್ಯಾಹ್ನ 2ರಿಂದ 5ರವರೆಗೆ)

ಮಾರ್ಚ್ 15ರಂದು: ಇತಿಹಾಸ, ಕಾಮರ್ಸ್, ಗಣಿತ ಮತ್ತು ಪ್ರಾಣಿಶಾಸ್ತ್ರ, (ಬೆಳಗ್ಗೆ 10ರಿಂದ 1ರವರೆಗೆ ), ಅರ್ಥಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಇಂಗ್ಲಿಷ್ ಮತ್ತು ಸಮಾಜಕಾರ್ಯ (ಮಧ್ಯಾಹ್ನ 2ರಿಂದ 5ರವರೆಗೆ)

ಮಾರ್ಚ್ 16ರಂದು: ಶಿಕ್ಷಣ ಶಾಸ್ತ್ರ, ಹಿಂದಿ, ಕಂಪ್ಯೂಟರ್ ಸೈನ್ಸ್, ಕಾನೂನು ಮತ್ತು ಸ್ಟ್ಯಾಟಿಸ್ಟಿಕ್ಸ್, (ಬೆಳಗ್ಗೆ 10ರಿಂದ 1ರವರೆಗೆ ), ಮ್ಯಾನೇಜ್ಮೆಂಟ್, ಬಯೋಕೆಮಿಸ್ಟ್ರಿ, ಎಲೆಕ್ಟ್ರಾನಿಕ್ಸ್ ಮತ್ತು ಸಮಾಜಶಾಸ್ತ್ರ (ಮಧ್ಯಾಹ್ನ 2ರಿಂದ 5ರವರೆಗೆ) ಪರೀಕ್ಷೆಗಳು ನಡೆಯಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+