ಗುಡ್ ನ್ಯೂಸ್; ಖಾಲಿಯಿರುವ 32,000 ಹುದ್ದೆಗಳ ಭರ್ತಿ: ಗ್ರೀನ್ ಸಿಗ್ನಲ್ ಕೊಟ್ಟ ಸಿದ್ದರಾಮಯ್ಯ
ಬೆಳಗಾವಿ: ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮೋದನೆ ನೀಡುವ ಮೂಲಕ ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಭಾಗದಲ್ಲಿ ಖಾಲಿಯಿರುವ 32,000 ಹುದ್ದೆಗಳ ಭರ್ತಿಗೂ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಈ ಭಾಗದ ವಿದ್ಯಾರ್ಥಿಗಳಿಗೆ 10,000 ವೈದ್ಯಕೀಯ, 31,000 ಇಂಜಿನಿಯರಿಂಗ್, ಡೆಂಟಲ್ ಹೋಮಿಯೋಪತಿ ಸೇರಿದಂತೆ ಇತರೆ ವ್ಯಾಸಾಂಗಗಳಿಗೆ 12,000 ಸೀಟುಗಳು ಲಭ್ಯವಾಗಿವೆ. ಉನ್ನತ ವ್ಯಾಸಾಂಗದಲ್ಲಿ ಒಟ್ಟು 51,606 ವಿದ್ಯಾರ್ಥಿಗಳಿಗೆ ಲಾಭವಾಗಿದೆ. ರಾಜ್ಯ ಸರ್ಕಾರ 900 ಕೆ.ಪಿ.ಎಸ್ ಶಾಲೆಗಳನ್ನು ತೆರೆಯಲು ಅನುಮೊದನೆ ನೀಡಿದೆ. ಈ ಫೈಕಿ 300 ಶಾಲೆಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆರೆಯಲಾಗುವುದು ಎಂದು ಹೇಳಿದರು.

ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ 1990ರಲ್ಲಿ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಯಿತು. 2013ರಲ್ಲಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು 371(ಜೆ) ಅಡಿ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿತು. ತದ ನಂತರ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(ಕೆ.ಕೆ.ಆರ್.ಡಿ.ಬಿ)ಯಾಗಿ ಮರುನಾಮಕರಣ ಮಾಡಲಾಗಿದ್ದು, ಇದುವರೆಗೂ ರೂ.24,778 ಕೋಟಿ ಅನುದಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
371(ಜೆ) ತಿದ್ದುಪಡಿಯ ನಂತರ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಹೆಚ್.ಕೆ.ಪಾಟೀಲ್ ಅವರ ಅಧ್ಯಕ್ಷತೆಯ ಸಮಿತಿ ಮಾಡಿ ವರದಿ ಪಡೆಯಲಾಯಿತು. ಈ ವರದಿಯಲ್ಲಿ ಸೂಚಿಸಿದ ಮಾದರಿಯಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಎ ಹಾಗೂ ಬಿ ಗ್ರೂಪ್ ಹುದ್ದೆಗಳಲ್ಲಿ ಶೇ.75 ರಷ್ಟು, ಸಿ ಗ್ರೂಪ್ ಹುದ್ದೆಗಳಲ್ಲಿ ಶೇ.80 ಹಾಗೂ ಡಿ ಗ್ರೂಪ್ ಹುದ್ದೆಗಳಲ್ಲಿ ಶೇ.85 ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ಶೇ.8 ರಷ್ಟು ಮೀಸಲಾತಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿಯನ್ನು ಹೈದರಾಬಾದ್ ಕರ್ನಾಟಕ ಅಭ್ಯರ್ಥಿಗಳಿಗೆ ನೀಡಲಾಗಿದೆ.
ಡಾ.ನಂಜುಡಪ್ಪ ವರದಿಯ ಅನುಷ್ಠಾನದ ಕುರಿತು ಅಧ್ಯಯನ ನಡೆಸಲು ಆರ್ಥಿಕ ತಜ್ಞ ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಬರುವ ಜನವರಿಯಲ್ಲಿ ತನ್ನ ವರದಿ ನೀಡಲಿದೆ. ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ ಆರ್ಥಿಕ ತಜ್ಞೆ ಪ್ರೊ.ಛಾಯಾ ದೇವಣಗಾಂವ್ಕರ್ ಅವರ ಸಮಿತಿ 400 ಪುಟಗಳ ವರದಿ ನೀಡಿದೆ. ಈ ಎರಡು ವರದಿಗಳ ಶಿಫಾರಸ್ಸುಗಳನ್ನು ಯಥಾವತ್ತಾಗಿ ಸರ್ಕಾರ ಅನುಷ್ಠಾನಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮಾದರಿಯಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಪ್ರತಿ ವರ್ಷ ರೂ.5000 ಕೋಟಿ ಅನುದಾನ ನೀಡುವಂತೆ ಶಾಸಕ ಎನ್.ಹೆಚ್.ಕೋನರೆಡ್ಡಿ ನೇತೃತ್ವದಲ್ಲಿ ಈ ಭಾಗದ ಎಲ್ಲಾ ಶಾಸಕರು ಮನವಿ ನೀಡಿದ್ದಾರೆ. ಪ್ರೊ.ಗೋವಿಂದರಾವ್ ಅವರ ವರದಿ ಬಳಿಕ ಈ ಕುರಿತು ಪರೀಶಿಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ನೀಡಿದರು.
ತಲಾ ಆದಾಯದಲ್ಲಿ ಉತ್ತರ ಕರ್ನಾಟಕ ಭಾಗ ಹಿಂದುಳಿದಿರುವಿಕೆ ಬಗ್ಗೆ ವಿಶ್ಲೇಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 1985ರಲ್ಲಿ ನಾನು ಹೈನುಗಾರಿಕೆ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಅಂದಿನಿಂದಲೂ ಉತ್ತರ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಗೆ ಆಸಕ್ತಿ ಕಡಿಮೆಯಿದೆ. ಬೆಂಗಳೂರು ಸಹಕಾರಿ ಹಾಲು ಒಕ್ಕೂಟದಲ್ಲಿ ದಿನ ಒಂದಕ್ಕೆ 17 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತದೆ. ಆದರೆ ಕಲಬುರ್ಗಿ, ಯಾದಗಿರಿ, ಬೀದರ್ ರಾಯಚೂರು ಸಹಕಾರಿ ಹಾಲು ಒಕ್ಕೂಟದಲ್ಲಿ ದಿನ ಒಂದಕ್ಕೆ ಕೇವಲ 67 ಸಾವಿರ ಲೀಟರ್ ಹಾಲು ಶೇಖರಣೆಯಾಗುತ್ತದೆ. ರಾಜ್ಯದ ಎಲ್ಲಾ ಸಹಕಾರಿ ಒಕ್ಕೂಟಗಳಲ್ಲಿ ದಿನ ಒಂದಕ್ಕೆ 1 ಕೋಟಿ ಲೀಟರ್ ಹಾಲು ಸಂಗ್ರಹಣೆಯಾದರೆ, ಇದರಲ್ಲಿ ಉತ್ತರ ಕರ್ನಾಟಕ ಭಾಗದ ಸಹಕಾರಿ ಹಾಲು ಒಕ್ಕೂಟಗಳಲ್ಲಿ ಕೇವಲ 10 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತದೆ.
ಹೈನುಗಾರಿಕೆ ಆದಾಯದ ಉತ್ತಮ ಮೂಲವಾಗಿದೆ. ರಾಜ್ಯ ಸರ್ಕಾರವು ಇದಕ್ಕೆ ಪ್ರೋತ್ಸಾಹ ನಿಡುತ್ತಿದ್ದು, ರೈತರಿಗೆ ಪ್ರತಿ ಲೀಟರ್ಗೆ ರೂ.7 ಪ್ರೋತ್ಸಾಹ ಧನ ನೀಡುತ್ತಿದೆ. ಈ ಇದಕ್ಕಾಗಿ ಪ್ರತಿದಿನ ರೂ.5 ಕೋಟಿ ವೆಚ್ಚವಾಗುತ್ತದೆ. ಉತ್ತರ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆ ಹೆಚ್ಚಾದರೆ ಜನರ ಆದಾಯವು ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಿಪ್ರಾಯಪಟ್ಟರು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications