ಅರಣ್ಯ ರಕ್ಷಕ ಹುದ್ದೆ ನೇಮಕಾತಿ; ಜೂನ್ 15ರ ತನಕ ಅರ್ಜಿ ಹಾಕಿ

ಬೆಂಗಳೂರು, ಮೇ 01 : ಅರಣ್ಯ ಇಲಾಖೆ 339 ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಮಾಡಲು 2ನೇ ಬಾರಿ ದಿನಾಂಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಹೊಸ ಆದೇಶದ ಪ್ರಕಾರ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 15/6/2020ರ ತನಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 17/6/2020ರ ತನಕ ಅವಕಾಶ ನೀಡಲಾಗಿದೆ.

ಹಿಂದೆ ಮೇ 15ರ ತನಕ ಅರ್ಜಿ ಸಲ್ಲಿಸಲು ಮತ್ತು ಮೇ 18ರ ತನಕ ಶುಲ್ಕ ಪಾವತಿ ಮಾಡಲು ಅವಕಾಶ ನೀಡಲಾಗಿತ್ತು. ಲಾಕ್ ಡೌನ್ ಹಿನ್ನಲೆಯಲ್ಲಿ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.

Forest Guard Recruitment Apply Till June 15

ಒಟ್ಟು 339 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ದ್ವಿತೀಯ ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿಗಳನ್ನು ಸಲ್ಲಿಸಲು 18 ವರ್ಷದ ಕನಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ - 1ರ ಅಭ್ಯರ್ಥಿಗಳಿಗೆ 32 ವರ್ಷ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 30 ವರ್ಷ. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 27 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಅಧಿಸೂಚನೆಯಲ್ಲಿ ಸೂಚಿಸಿರುವ ವೃತ್ತಗಳಲ್ಲಿ ಯಾವುದಾದರೂ ಒಂದು ವೃತ್ತಕ್ಕೆ ಮಾತ್ರ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ www.aranya.gov.in ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+