ಅರಣ್ಯ ಇಲಾಖೆ ನೇಮಕಾತಿ; ಅಭ್ಯರ್ಥಿಗಳಿಗೆ ಸಿಹಿ ಸುದ್ದಿ

ಬೆಂಗಳೂರು, ಏಪ್ರಿಲ್ 02 : ಕರ್ನಾಟಕ ಸರ್ಕಾರ ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವ ದಿನಾಂಕವನ್ನು ವಿಸ್ತರಣೆ ಮಾಡಿದೆ. ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಏಪ್ರಿಲ್ 15ರ ತನಕ ಮೊದಲು ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಅಧಿಸೂಚನೆ ಹೊರಡಿಸಿತ್ತು.

ರಾಜ್ಯದ 11 ಅರಣ್ಯ ವೃತ್ತಗಳಲ್ಲಿ 339 ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿತ್ತು. ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ತನಕ ವಿಸ್ತರಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಶುಲ್ಕವನ್ನು ಪಾವತಿ ಮಾಡಲು ಮೇ 18ರ ತನಕ ಅವಕಾಶ ನೀಡಲಾಗಿದೆ. ದೈಹಿಕ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳಿಗೆ ಮಾತ್ರ ಲಿಖಿತ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.

Forest Guard Recruitment Date Extended Till May 15

ಬೆಳಗಾವಿ ವೃತ್ತದಲ್ಲಿ 21, ಬೆಂಗಳೂರು ವೃತ್ತದಲ್ಲಿ 45, ಬಳ್ಳಾರಿ ವೃತ್ತದಲ್ಲಿ 15, ಚಾಮರಾಜನಗರ ವೃತ್ತದಲ್ಲಿ 35, ಚಿಕ್ಕಮಗಳೂರು ವೃತ್ತದಲ್ಲಿ 10, ಧಾರವಾಡ ವೃತ್ತದಲ್ಲಿ 13, ಹಾಸನ ವೃತ್ತದಲ್ಲಿ 20 ಸೇರಿದಂತೆ 339 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2ನೇ ಪಿಯುಸಿ/12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. 2ನೇ ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ದೈಹಿಕ ಪರೀಕ್ಷೆ ಮುಗಿದ ಬಳಿಕ ಅಧಿಸೂಚನೆಯಲ್ಲಿ ತಿಳಿಸಿರುವ ವೃತ್ತವಾರು ಪರೀಕ್ಷಾ ಕೇಂದ್ರದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+