275 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎಫ್‌ಎಸ್‌ಎಸ್ಎಐ

ಬೆಂಗಳೂರು, ಮಾರ್ಚ್ 08 : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ 275 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 14/4/2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್ಎಐ) ಅಸಿಸ್ಟೆಂಟ್ ಡೈರೆಕ್ಟರ್, ಟೆಕ್ನಿಕಲ್ ಆಫೀಸರ್, ಸೆಂಟ್ರಲ್ ಫುಡ್ ಸೇಫ್ಟಿ ಆಫೀಸರ್, ಅಸಿಸ್ಟೆಂಟ್, ಡೆಪ್ಯೂಟಿ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ವೇತನವನ್ನು ಪಾವತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಫ್‌ಎಸ್‌ಎಸ್ಎಐ ನೇಮಕಾತಿ ಆದೇಶದಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಪಡೆದಿರಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

FSSAI Recruitment 2019 apply for 275 Various Posts

ಪ್ರಮುಖ ದಿನಾಂಕಗಳು
* 15/3/2019ರಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ
* 14/4/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+