FSSAI ನೇಮಕಾತಿ: 44 ವಿವಿಧ ಹುದ್ದೆಗಳಿಗೆ ನ.11ರೊಳಗೆ ಅರ್ಜಿ ಹಾಕಿ

ನವದೆಹಲಿ, ಅಕ್ಟೋಬರ್ 21: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) 2019ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 44 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 11ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್ಎಐ) ಅಸಿಸ್ಟೆಂಟ್ ಡೈರೆಕ್ಟರ್, ಹಿರಿಯ ಖಾಸಗಿ ಕಾರ್ಯದರ್ಶಿ, ಖಾಸಗಿ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ವೇತನವನ್ನು ಪಾವತಿ ಮಾಡಲಾಗುತ್ತದೆ.

ಸಂಸ್ಥೆ ಹೆಸರು: Food Safety and Standards Authority of India
ಹುದ್ದೆ ಹೆಸರು: Assistant Director, Senior Private Secretary, Personal Secretary
ಒಟ್ಟು ಹುದ್ದೆ: 44
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 11.11.2019.

FSSAI recruitment 2019 apply for 44 Assistant Director and various Post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಫ್‌ಎಸ್‌ಎಸ್ಎಐ ನೇಮಕಾತಿ ಆದೇಶದಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಪಡೆದಿರಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಹತೆ: ಬಿಇ. ಬಿಟೆಕ್, ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ
ವಯೋಮಿತಿ: ಗರಿಷ್ಠ 56 ವರ್ಷ.
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: 16.10.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 11.11.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+