ಗದಗ : ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

ಗದಗ, ಏ. 13 : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗದಗ ಜಿಲ್ಲಾ ಘಟಕದಲ್ಲಿ ಬರುವ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 45 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 7, 2015.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವ ಸಿಬಿಎಸ್‌ಇ ಅಥವ ಐಸಿಎಸ್ಇ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಈ ವಿದ್ಯಾರ್ಹತೆ ಹೊರತುಪಡಿಸಿ ಇನ್ನಿತರ ಯಾವುದೇ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

gadag

ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಿದ ನಂತರ ಯಾವುದೇ ಪತ್ರ ವ್ಯವಹಾರಕ್ಕೆ ಅವಕಾಶವಿರುವುದಿಲ್ಲ. [ಅರ್ಜಿ ಸಲ್ಲಿಸಲು ವಿಳಾಸ]

ಅರ್ಜಿಗಳನ್ನು http://gadag-va.kar.nic.in/ ವೆಬ್‌ಸೈಟ್‌ನಿಂದ ಪಡೆದು ಭರ್ತಿ ಮಾಡಬೇಕು. ಅರ್ಜಿಗಳನ್ನು ಮೇ 7, 2015 ರ ಸಂಜೆ 5.30ರೊಳಗೆ ಸಲ್ಲಿಸಬೇಕು. ಅರ್ಜಿ ಶುಲ್ಕವನ್ನು ಮೇ 11ರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದಾದರೂ ಶಾಖೆಯಲ್ಲಿ ಬ್ಯಾಂಕ್ ವ್ಯವಹಾರ ವೇಳೆಯಲ್ಲಿ ಪಾವತಿ ಮಾಡತಕ್ಕದ್ದು.

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಇತರರಿಗೆ 200 ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ.

ವಯೋಮಿತಿ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1 ರ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷ. 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 38 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+