176 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಗೈಲ್
ಬೆಂಗಳೂರು, ಡಿಸೆಂಬರ್ 21 : ಗೈಲ್ 176 ಹುದ್ದೆಗಳನ್ನು ಭರ್ತಿ ಮಾಡಲಿ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 31, 2018 ಕೊನೆಯ ದಿನವಾಗಿದೆ.
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ (ಗೈಲ್) 176 ಸೀನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಹಾಕುವ ಅಭ್ಯರ್ಥಿಗಳು ಮೆಕಾನಿಕಲ್/ಕೆಮಿಕಲ್/ಪೆಟ್ರೋಕೆಮಿಕಲ್/ಕೆಮಿಕಲ್ ಟೆಕ್ನಾಲಜಿ/ಪೆಟ್ರೋ ಕೆಮಿಕಲ್ ಟೆಕ್ನಾಲಜಿಯಲ್ಲಿ ಶೇ 65ರಷ್ಟು ಅಂಕಗಳೊಂದಿಗೆ ಇಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವವರಿಗೆ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಅಂಗವಿಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಾಮಾನ್ಯ, ಓಬಿಸಿ ಅಭ್ಯರ್ಥಿಗಳಿಗೆ 200 ರೂ. ಶುಲ್ಕ ನಿಗದಿ ಮಾಡಲಾಗಿದೆ.
ವೇತನ ಶ್ರೇಣಿ : 60000-180000 ಪ್ರತಿ ತಿಂಗಳು.
ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications