38 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಗೈಲ್
ಬೆಂಗಳೂರು, ನವೆಂಬರ್ 02 : ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ 38 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 21 ನವೆಂಬರ್ 2018 ಕೊನೆಯ ದಿನವಾಗಿದೆ.
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ (ಗೈಲ್) ಚೀಫ್ ಮ್ಯಾನೇಜರ್, ಸೀನಿಯರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಪದವಿ, ಎಂಬಿವಿಎಸ್, ಸ್ನಾತಕೋತ್ತರ ಪದವಿ, ಸಿಎ/ICWA ವ್ಯಾಸಂಗ ಮಾಡಿದವರು ಮತ್ತು ನಿಗದಿತ ಕ್ಷೇತ್ರದಲ್ಲಿ ಅನುಭವ ಹೊಂದಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 33 ರಿಂದ 48 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ವೇತನ ಶ್ರೇಣಿ
* ಚೀಫ್ ಮ್ಯಾನೇಜರ್ 90000-240000
* ಸೀನಿಯರ್ ಆಫೀಸರ್ 60000-180000 ಪ್ರತಿ ತಿಂಗಳು
ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.
ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications