504 ಹುದ್ದೆಗಳ ಭರ್ತಿಗೆ ಸರ್ಕಾರದ ಒಪ್ಪಿಗೆ, ಇಲಾಖೆಗೆಳ ವಿವರ

ಬೆಂಗಳೂರು, ಫೆಬ್ರವರಿ 19; ಬಜೆಟ್ ಅಧಿವೇಶನದಲ್ಲಿ ಕರ್ನಾಟಕದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಕುರಿತು ಚರ್ಚೆಗಳು ನಡೆದಿವೆ. ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದು, 504 ಕೆಎಎಸ್‌ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡಿರುವ ಕುರಿತು ಮಾಹಿತಿ ನೀಡಿದ್ದಾರೆ.

ವಿಧಾನ ಪರಿಷತ್‌ನಲ್ಲಿ ನಿರಾಣಿ ಹಣಮಂತ್ ರುದ್ರಪ್ಪ ಕೇಳಿದ ಪ್ರಶ್ನೆಗೆ ಉತ್ತರ ನೀಡಲಾಗಿದೆ. ರಾಜ್ಯದ ಯಾವ ಯಾವ ಇಲಾಖೆಯಿಂದ ಖಾಲಿ ಇರುವ ಕೆಎಎಸ್ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ? ಎಂದು ಪ್ರಶ್ನಿಸಲಾಗಿತ್ತು.

Gazetted Probationers Recruitment Siddaramaiah Answer

ಉತ್ತರದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಕಾರಾಗೃಹ ಇಲಾಖೆ, ವಾಣಿಜ್ಯ ತೆರಿಗೆಗಳ ಇಲಾಖೆ, ಖಜಾನೆ ಇಲಾಖೆ, ಅಬಕಾರಿ ಇಲಾಖೆ, ಸಹಕಾರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಹೇಳಿದ್ದಾರೆ.

ಎಷ್ಟು ಕೆಎಎಸ್ ಹುದ್ದೆಗಳ ನೇಮಕಾತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ಅವುಗಳಲ್ಲಿ ಎಷ್ಟು ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯು ಒಪ್ಪಿಗೆ ನೀಡಿದೆ?, ವಿವರ ನೀಡುವುದು ಎಂದು ಪ್ರಶ್ನಿಸಲಾಗಿತ್ತು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಇಲಾಖೆ ಮತ್ತು ಹುದ್ದೆಗಳ ಮಾಹಿತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿಯಂತೆ 656 ಹುದ್ದೆಗಳನ್ನು ಭರ್ತಿ ಮಾಡಲು ಆಡಳಿತಾತ್ಮಕ ಅನುಮೋದನೆ ಕೋರಲಾಗಿತ್ತು. ಆದರೆ ಆರ್ಥಿಕ ಇಲಾಖೆಯು 504 ಹುದ್ದೆಗಳನ್ನು ಭರ್ತಿ ಮಾಡಲು ಒಪ್ಪಿಗೆ ನೀಡಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ 85, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 55, ಕಂದಾಯ ಇಲಾಖೆಯಲ್ಲಿ 76, ಪೊಲೀಸ್ ಇಲಾಖೆಯಲ್ಲಿ 10, ಕಾರಾಗೃಹ ಇಲಾಖೆಯಲ್ಲಿ 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ 140, ಖಜಾನೆ ಇಲಾಖೆಯಲ್ಲಿ 48, ಅಬಕಾರಿ ಇಲಾಖೆಯಲ್ಲಿ 10, ಸಹಕಾರ ಇಲಾಖೆಯಲ್ಲಿ 21, ಸಮಾಜ ಕಲ್ಯಾಣ ಇಲಾಖೆಯಲ್ಲಿ 27, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 07, ಕಾರ್ಮಿಕ ಇಲಾಖೆ 04 ಹುದ್ದೆಗಳನ್ನು ತುಂಬಲಾಗುತ್ತದೆ.

ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ03, ಪ್ರವಾಸೋದ್ಯಮ ಇಲಾಖೆಯಲ್ಲಿ 02, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ 09, ಯುವ ಸಬಲೀಕರಣ ಇಲಾಖೆ, ಕ್ರೀಡಾ ಇಲಾಖೆಗಳಲ್ಲಿ 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+