Indian Railways Job: ಭಾರತೀಯ ರೈಲ್ವೆಯಲ್ಲಿ ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ-ಏನದು?

Indian Railways: ಭಾರತೀಯ ರೈಲ್ವೆ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿಗೆ ಇಂಗ್ಲೀಷ್‌, ಹಿಂದಿಯಲ್ಲಿ ಮಾತ್ರ ಪರೀಕ್ಷೆಯನ್ನು ನಡೆಸಲಾಗುತ್ತಿತ್ತು. ಆದರೆ, ಇದೀಗ ಕನ್ನಡದಲ್ಲಿಯೂ ಪರೀಕ್ಷೆ ನಡೆಸುವಂತೆ ರಾಜ್ಯ ರೈಲ್ವೆ ಸಚಿವರು ಕೇಳಿಕೊಂಡಿದ್ದಾರೆ.

ಕನ್ನಡಿಗರಿಗೆ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಶುಭಸುದ್ದಿ ನೀಡಿದ್ದು, ಮುಂಬರುವ ದಿನಗಳಲ್ಲಿ ರೈಲ್ವೆ ಇಲಾಖೆಯ ಎಲ್ಲಾ ನೇಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸುವಂತೆ ರೈಲ್ವೆ ಇಲಾಖೆ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Good news for Kannadigas in Indian Railways

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯಲ್ಲಿ ಮುಂಬಡ್ತಿ ನೀಡಲು ನಡೆಸುತ್ತಿದ್ದ ಸಾಮಾನ್ಯ ವಿಭಾಗ ಸ್ಪರ್ಧಾತ್ಮಕ ಪರೀಕ್ಷೆಯನ್ನು ಶೀಘ್ರದಲ್ಲೇ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಆದೇಶ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ, ರಾಜ್ಯದ 59 ರೈಲ್ವೆ ನಿಲ್ದಾಣಗಳಲ್ಲಿ ಸುಮಾರು 54 ನಿಲ್ದಾಣಗಳನ್ನು ಮೇಲ್ದೇರ್ಜೆಗೇರಿಸುವ ಅಭಿವೃದ್ಧಿ ಕಾಮಗಾರಿಗಳು 2025-26ರೊಳಗೆ ಮುಕ್ತಾಯಗೊಳ್ಳಲಿದ್ದು, ಉಳಿದ ಕಾಮಕಾರಿಗಳು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

11 ಉದ್ದೆಗಳಿಗೆ ಅರ್ಜಿ ಆಹ್ವಾನ: ಬೆಂಗಳೂರು ಜೀವನಾಡಿ ಸಾರಿಗೆಯಲ್ಲೊಂದಾದ ನಮ್ಮ ಮೆಟ್ರೋ ಉದ್ಯೋಗವಕಾಶಗಳನ್ನು ಒದಗಿಸುತ್ತಲೇ ಬಂದಿದೆ. ಹಾಗೆಯೇ ಇದೀಗ ಬಿಎಂಆರ್‌ಸಿಎಲ್‌ ಸಂಸ್ಥೆಯಲ್ಲಿ ಒಟ್ಟು 11 ಉದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಆಹುದ್ದೆಗಳು ಯಾವುವು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಮಾಸಿಕ ವೇತನದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಬಿಎಂಆರ್‌ಸಿಎಲ್‌ ಸಂಸ್ಥೆಯಲ್ಲಿ ಖಾಲಿಯಿರುವ ಮುಖ್ಯ ಎಂಜಿನಿಯರ್, ಮುಖ್ಯ ಡೆಪ್ಯುಟಿ ಎಂಜಿನಿಯರ್/ನಿರ್ವಾಹಕ ಎಂಜಿನಿಯರ್, ಸಹಾಯಕ ಎಂಜಿನಿಯರ್/ವಿಭಾಗ ಎಂಜಿನಿಯರ್‌ನ ಒಟ್ಟು 11 ಹುದ್ದೆಗಳ ಭರ್ತಿ ಮಾಡಲು ಸಂಸ್ಥೆಯು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ರೈಲು ನೇಮಕಾತಿ 2024 ಸಂಬಂದಿತ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಜುಲೈ 31 ಆಗಿದ್ದು, ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ.

ಹುದ್ದೆಯ ವಿವರ: ಸಲಹೆಗಾರ/ಮುಖ್ಯ ಎಂಜಿನಿಯರ್ (ಸಿವಿಲ್), ಮುಖ್ಯ ಡೆಪ್ಯುಟಿ ಎಂಜಿನಿಯರ್/ನಿರ್ವಾಹಕ ಎಂಜಿನಿಯರ್ (ಟ್ರ್ಯಾಕ್), ಸಹಾಯಕ ಎಂಜಿನಿಯರ್ / ವಿಭಾಗ ಎಂಜಿನಿಯರ್ ಸೇರಿ ಒಟ್ಟು 11 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಪೀಡ್ ಪೋಸ್ಟ್/ಕೊರಿಯರ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗ ಸ್ಥಳ ಬೆಂಗಳೂರು ಆಗಿದೆ.

ಅರ್ಜಿ ಸಲ್ಲಿಕೆಯ ದಿನಾಂಕ ಜುಲೈ 1ರಿಂದ ಆರಂಭವಾಗಿದ್ದು, ಜುಲೈ 31ರವರೆಗೂ ಸಮಯವಕಾಶ ಇದೆ. ಈ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 55 ವರ್ಷ ಮತ್ತು ಕನಿಷ್ಠ 35 ವರ್ಷದ ವಯೋಮಿತಿ ಆಗರಬೇಕಾಗುತ್ತದೆ.

* ಸಲಹೆಗಾರ/ಮುಖ್ಯ ಎಂಜಿನಿಯರ್ (ಸಿವಿಲ್) ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಸಿವಿಲ್ ಇಂಜಿನೀಯರಿಂಗ್ ವಿಭಾಗದಲ್ಲಿ ಬಿ‌ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕಾಗುತ್ತದೆ. ಆಯ್ಕೆಯಾದವರಿಗೆ ಮಾಸಿಕ ವೇತನ 40,000-2,10,693 ರೂಪಾಯಿವರೆಗೂ ಇರುತ್ತದೆ.

* ಡೆಪ್ಯುಟಿ ಮುಖ್ಯ ಎಂಜಿನಿಯರ್/ನಿರ್ವಾಹಕ ಎಂಜಿನಿಯರ್ (ಟ್ರ್ಯಾಕ್) ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಸಿವಿಲ್ ಇಂಜಿನೀಯರಿಂಗ್ ವಿಭಾಗದಲ್ಲಿ ಬಿ‌ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕಾಗುತ್ತದೆ. ಅಥವಾ ಕನಿಷ್ಠ 12 ವರ್ಷದ ಅನುಭವ ಹೊಂದಿರುವ ಬಿ‌ಇ ಅಥವಾ ಬಿ.ಟೆಕ್ ಪದವಿದರರಿಗೆ ಆದ್ಯತೆ ನೀಡಲಾಗುತ್ತದೆ. ಇವರಿಗೆ ಮಾಸಿಕ ವೇತನ 40,000-2,10,693 ರೂಪಾಯಿವರೆಗೂ ಇರುತ್ತದೆ.

ಆಯ್ಕೆ ಪ್ರಕ್ರಿಯೆಯ ವಿವರ: ಬಿಎಂಆರ್‌ಸುಎಲ್‌ ಸಂಸ್ಥೆಯಿಂದ ಅರ್ಜಿಗಳ ಪರಿಶೀಲನೆ ನಡೆದ ಬಳಿಕ ಪೂರಕ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿನ ಅಭ್ಯರ್ಥಿಗಳ ಪ್ರದರ್ಶನವನ್ನು ಪರಿಶೀಲಿಸಿ ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿಯ ನಮೂನೆಯನ್ನು ಪಡೆದುಕೊಂಡು, ಅರ್ಜಿ ನಮೂನೆಯನ್ನು ಭರ್ತಿ ಮಾಡಿ ದಾಖಲೆಗಳೊಂದಿಗೆ, ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್/ಕೊರಿಯರ್ ಮೂಲಕ ಕಳುಹಿಸಿ. ಅಭ್ಯರ್ಥಿಗಳು ಸ್ಪೀಡ್ ಪೋಸ್ಟ್/ಕೊರಿಯರ್ ಹಾಳೆ ಮೇಲೆ ಅರ್ಜಿ ಸಲ್ಲಿಸಲು ಬಯಸುವ ನಿರ್ದಿಷ್ಟ ಹುದ್ದೆಯನ್ನು ಉಲ್ಲೇಖ ಮಾಡಬೇಕಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+