ಯೂನಿಯನ್‌ ಬ್ಯಾಂಕ್‌ನಿಂದ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ-ಕನ್ನಡಿಗರಿಗೆ ಎಷ್ಟು ಹುದ್ದೆಗಳು ಖಾಲಿ?

Good News: ಕರ್ನಾಟಕದಲ್ಲೇ ಬ್ಯಾಂಕ್‌ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಆರೋಪ ಮೊದಲಿನಿಂದಲೂ ಕೇಳಿಬರುತ್ತಿದೆ. ಆದರೆ, ಇದೀಗ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾವು ಕನ್ನಡಿಗೆ ಉದ್ಯೋಗ ಸಿಗುವುದಿಲ್ಲ ಎನ್ನುವ ಕೊರಗನ್ನು ದೂರ ಮಾಡಿದೆ. ಮಾಹಿತಿ ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.

ಸಾರ್ವಜನಿಕ ವಲಯದ ಸಂಸ್ಥೆಯಾದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕನ್ನಡಿಗರಿಗೆ ಸಿಹಿಸುದ್ದಿ ನೀಡಿದೆ. 2025-26ನೇ ಸಾಲಿಗೆ 1,500 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಪೈಕಿ ಕರ್ನಾಟಕದಲ್ಲಿ 3,00 ಹುದ್ದೆಗಳ ಭರ್ತಿ ಮಾಡಲಿದೆ.

Good news for Kannadigas Union Bank Invites Applications for 1 500 posts

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 13ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಪದವಿ ಪಡೆದಿರಬೇಕು. ಜೊತೆಗೆ ಸ್ಥಳೀಯ ಭಾಷೆಯ ಬಗ್ಗೆ ತಿಳಿದುಕೊಂಡಿರಬೇಕಾಗುತ್ತದೆ ಎಂದು ತಿಳಿಸಿದೆ.

ಇನ್ನು ವಯೋಮಿತಿ ವಿಚಾರಕ್ಕೆ ಬಂದರೆ, ಅಕ್ಟೋಬರ್‌, 01, 2024ರಂತೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳಿರಬೇಕು. ಕಾಯ್ದಿರಿಸಿದ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಸಂಬಳದ ವಿವರ: ಸಾಮಾನ್ಯ, OBC ಅಭ್ಯರ್ಥಿಗಳು 850 ರೂಪಾಯಿ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು ರೂಪಾಯಿ 175 ರೂಪಾ ಪಾವತಿಸಬೇಕಾಗುತ್ತದೆ. ಇನ್ನು ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ವೈಯಕ್ತಿಕ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಬಳಿಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿದ 48,480 ರೂಪಾಯಿನಿಂದ 85,920 ರೂಪಾಯಿ ನೀಡಲಾಗುತ್ತದೆ.

ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ದಿನಾಂಕ ಅಕ್ಟೋಬರ್ 24, 2024ರಿಂದ ಆರಂಭವಾಗಿದ್ದು, ನವೆಂಬರ್ 13, 2024 ಕೊನೆಯ ದಿನಾಂಕವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+