Police Recruitment: ರಾಜ್ಯದಲ್ಲಿ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್
Police Recruitment: ರಾಜ್ಯ ಸರ್ಕಾರ ಆಗಾಗ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್‌ಗಳನ್ನು ನೀಡುತ್ತಲೇ ಇರುತ್ತದೆ. ಹಾಗೆಯೇ ಇದೀಗ ಮುಂದಿನ 6-7ತಿಂಗಳಲ್ಲಿ 1,200 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತೇವೆ. ರಾಜ್ಯದಲ್ಲಿ 10ರಿಂದ 12,000 ಪೊಲೀಸ್ ಸಿಬ್ಬಂದಿ ಕೊರತೆ ಇದ್ದು, ಇವುಗಳನ್ನು ಸಹ ಭರ್ತಿ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕಾನೂನು ಸುವ್ಯವಸ್ಥೆ ಹಾಳಾಗಿದೆ ಅಂತಾರೆ. ಅಂತಹ ಒಂದು ಉದಾಹರಣೆ ಕೊಡಿ? ಸುಮ್ಮನೆ ಬೇಕಾಬಿಟ್ಟಿಯಾಗಿ ಆರೋಪಗಳನ್ನ ಮಾಡಬಾರದು. ಅವರ ಕಾಲದಲ್ಲಿ ಎಷ್ಟು ಆಗಿದೆ ಎಂಬುವುದರ ಬಗ್ಗೆ ದಾಖಲೆ ಇದೆ. ಅದನ್ನು ಸಮಯ ಬಂದಾಗ ನಾವು ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.

ಮಂಗಳೂರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, 48 ಗಂಟೆಯಲ್ಲಿ ಮಂಗಳೂರು ದರೋಡೆ ಪ್ರಕರಣವನ್ನ ಬೇಧಿಸಿದ್ದೇವೆ. ಬೀದರ್ ದರೋಡೆ ಕೇಸ್ ಕೂಡ ಕೊನೇ ಹಂತದಲ್ಲಿದೆ. ಆದಷ್ಟು ಬೇಗ ನಮ್ಮ ಪೊಲೀಸರು ಅವರನ್ನು ಸಹ ಅರೆಸ್ಟ್ ಮಾಡುತ್ತಾರೆ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
350 ಹುದ್ದೆಗಳಿಗೆ ಅರ್ಜಿ ಆಹ್ವಾನ: ಖಾಲಿಯಿರುವ 350 ಹುದ್ದೆಗಳಿಗೆ ಬಿಇಎಲ್ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ತಾಂತ್ರಿಕ ವಿಭಾಗದಲ್ಲಿ ವ್ಯಾಸಂಗ ಮಾಡಿದವರಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಖಾಲಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ವಿಜ್ಞಾನ ವಿಭಾಗದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅಲ್ಲದೇ ಬಿಇಎಲ್ ಕಂಪನಿಯು ಪ್ರತಿಷ್ಠಿತಿ ಸಂಸ್ಥೆ ಆಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎಲ್ಲಾ ಸರ್ಕಾರಿ ಸೌಕರ್ಯಗಳು ಸರಿಯಾದ ಸಮಯಕ್ಕೆ ಲಭ್ಯ ಆಗಲಿವೆ.
ವರ್ಗವಾರು ಹುದ್ದೆಗಳು ವರ್ಗೀಕರಣ: ಸಾಮಾನ್ಯ 143, ಇಡಬ್ಲುಎಸ್ 35, ಒಬಿಸಿ 94, ಎಸ್ಸಿ 52 ಹಾಗೂ ಎಸ್ಟಿ ವರ್ಗದವರಿಗೆ 26 ಉದ್ಯೋಗಗಳು ಖಾಲಿಯಿವೆ. ಉದ್ಯೋಗದ ಹೆಸರು ಪ್ರೊಬೇಷನರಿ ಇಂಜಿನಿಯರ್ ಆಗಿದ್ದು, ಪ್ರೊಬೇಷನರಿ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್)- 200, ಪ್ರೊಬೇಷನರಿ ಇಂಜಿನಿಯರ್ (ಮೆಕನಿಕಲ್)- 150 ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 40,000ದಿಂದ 1,40,000 ರೂಪಾಯಿವರೆಗೂ ಇರಲಿದೆ. ಅರ್ಜಿ ಸಲ್ಲಿಸಬಯಸುವವರು ಹೆಚ್ಚಿನ ಬಿಇಎಲ್ ಸಂಸ್ಥೆಯ https://bel-india.in/ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.












Click it and Unblock the Notifications