ಉದ್ಯೋಗ: ಹಾಸನ, ಕೊಪ್ಪಳ, ಬಾಗಲಕೋಟೆ ಜಿಲ್ಲೆಯವರು ಗಮನಿಸಿ

Posted By:
Subscribe to Oneindia Kannada

ಬೆಂಗಳೂರು, ಸೆ. 24: ಹಾಸನ, ಕೊಪ್ಪಳ, ಬಾಗಲಕೋಟೆ ಜಿಲ್ಲೆಯ ನಿರುದ್ಯೋಗಿಗಳು ಈ ಕೆಳಕಂಡ ಉದ್ಯೋಗ ಮಾಹಿತಿ ಬಳಸಿಕೊಳ್ಳಬಹುದು.ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಭಾರತೀಯ ವಾಯು ಸೇನೆಗಾಗಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಹಾಸನ ಜಿಲ್ಲೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ ಕರೆಯಲಾಗಿದೆ.

ಭಾರತೀಯ ವಾಯು ಸೇನೆ : ನಾನ್ ಟೆಕ್ನಿಕಲ್ ಹುದ್ದೆಗೆ ಅರ್ಜಿ
ಭಾರತೀಯ ವಾಯು ಸೇನೆಯಲ್ಲಿ ಖಾಲಿ ಇರುವ ನಾನ್ ಟೆಕ್ನಿಕಲ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಯ ಯುವಕರು ಸೆಪ್ಟೆಂಬರ್ 29 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸೈನಿಕ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.080-2559 2199ಗೆ ಸಂಪರ್ಕಿಸಬಹುದಾಗಿದೆ.

****

ಗ್ರಾಮಲೆಕ್ಕಿಗರ ಹುದ್ದೆಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಹಾಸನ: ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ 2016 ನೇ ಸಾಲಿನಲ್ಲಿ ಖಾಲಿ ಇರುವ 59 ಗ್ರಾಮಲೆಕ್ಕಿಗರ ಹುದ್ದೆಗಳನ್ನು ಅರ್ಹತೆ (Merit) ಆಧಾರದ ಮೇಲೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದಕ್ಕೆ ಪಿ.ಯು.ಸಿ. ವಿದ್ಯಾರ್ಹತೆಯನ್ನು ನಿಗದಿ ಪಡಿಸಿದೆ.

Government Job Openings Updates Hassan, Koppal and Bagalkot districts

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-10-2016 ಆಗಿರುತ್ತದೆ.

ಹೆಚ್ಚಿನ ವಿವರಗಳಿಗೆ http://www.hassan.nic.in/ ಅಥವಾ http://hassan-va.kar.nic.in/ ಈ ವೆಬ್‍ಸೈಟ್‍ಗಳನ್ನು ನೋಡುವಂತೆ ಹಾಸನ ಜಿಲ್ಲಾ ಅಪರ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ಸರ್ಕಾರಿ ನೌಕರರು ಮತ್ತು ಸಿಬ್ಬಂದಿಗಾಗಿ "ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ"
ಹಾಸನ: ರಾಜ್ಯ ಸರ್ಕಾರದ ಆದೇಶದನ್ವಯ ರಾಜ್ಯದ ಎಲ್ಲ ವರ್ಗದ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ "ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ"ಯನ್ನು ಕಡ್ಡಾಯವಾಗಿ ರಾಜ್ಯ ವಿದ್ಯುನ್ಮಾನ ಅಭಿವೃದ್ದಿ ನಿಗಮದ ಕಿಯಾನಿಕ್ಸ್-ಪೋರ್ಟಲ್ ಮುಖೇನ ಆನ್‍ಲೈನ್ ಅರ್ಜಿ ಸಲ್ಲಿಸಿ ಪರೀಕ್ಷೆ ತೆಗೆದುಕೊಂಡು ತೇರ್ಗಡೆ ಹೊಂದಬೇಕು.

ಈ ಕುರಿತು ಸೂಕ್ತ ತರಬೇತಿ, ಮಾರ್ಗದರ್ಶನ, ಸಲಹೆಗಾಗಿ ರಾಜ್ಯದಲ್ಲಿಯೇ ಪ್ರಥಮವಾಗಿ ಹಾಸನ ಜಿಲ್ಲೆಯ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಆನ್ ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಹಾಸನ ಕಿಯಾನಿಕ್ಸ್ -ತರಬೇತಿ ಕೇಂದ್ರದಲ್ಲಿ ಹೆಲ್ಪ್ ಡೆಸ್ಕ್ : 9449748879
ಹೆಚ್ಚಿನ ಮಾಹಿತಿಗಾಗಿ ಕಿಯಾನಿಕ್ಸ್ ಕಂಪ್ಯೂಟರ್ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಎ.ಹುಲಿಗೇಶಿ
Wattsapp No: 9449748879, Email ID: keonics.4hassan@gmail.com

(ಒನ್ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Various job openings available for in rural Karnataka region. Interested can apply for Indian Air force Non technical jobs in Bagalkote and Koppal.Village accountant job available in Hassan District.
Please Wait while comments are loading...