ಒಲಂಪಿಕ್ಸ್ ಪ್ಯಾರಾಒಲಂಪಿಕ್ಸ್ ಪದಕ ವಿಜೇತರಿಗೆ ನೇರ ನೇಮಕಾತಿಯಡಿ ಸರ್ಕಾರಿ ಉದ್ಯೋಗ: ಸಿಎಂ ಬೊಮ್ಮಾಯಿ
ಬೆಂಗಳೂರು, ಡಿಸೆಂಬರ್ 6: ಕ್ರೀಡಾಪಟುಗಳಿಗೆ ನೇರ ನೇಮಕಾತಿಯಡಿ ಸರ್ಕಾರಿ ಉದ್ಯೋಗ ನೀಡುವ ಯೋಜನೆಗೆ ಮುಂದಿನ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗುವುದು. ಒಲಂಪಿಕ್ಸ್ ಹಾಗೂ ಪ್ಯಾರಾ ಒಲಂಪಿಕ್ಸ್ ಪದಕವಿಜೇತರಿಗೆ ಪದವೀಧರರಿಗೆ ಗ್ರೂಪ್-ಎ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಏಕಲವ್ಯ ಕ್ರೀಡಾ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಅವರು ಮಾತನಾಡಿದರು. ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಕ್ರೀಡಾಪಟುಗಳ ನೇರ ನೇಮಕಾತಿ, ಉದ್ಯೋಗ ನೀಡುವ ಯೋಜನೆಗೆ ಅನುಮೋದನೆ ನೀಡಲಾಗುದು ಎಂದರು.
ಏಷಿಯನ್ ಗೇಮ್ಸ್ ಹಾಗೂ ಕಾಮನ್ ವೆಲ್ತ್ ಪದಕ ವಿಜೇತ ಪದವೀಧರರಿಗೆ ಗ್ರೂಪ್-ಬಿ ಉದ್ಯೋಗ, ಇದಕ್ಕಿಂತ ಕಡಿಮೆ ಸ್ತರದ ಕ್ರೀಡಾಕೂಟದ ಪದಕವಿಜೇತರಿಗೆ ಗ್ರೂಪ್-ಸಿ ಹಾಗೂ ಗ್ರೂಪ್-ಡಿ ಉದ್ಯೋಗ ನೀಡಲಾಗುವುದು. ಕ್ರೀಡಾಪಟುಗಳಿಗೆ ಸರ್ಕಾರದ ಉದ್ಯೋಗ ನೀಡುವ ನೀತಿ ದೇಶದಲ್ಲಿ ಕರ್ನಾಟಕದ ಹೊರತು ಬೇರೆ ಯಾವುದೇ ರಾಜ್ಯದಲ್ಲಿಲ್ಲ ಎಂದು ತಿಳಿಸಿದರು.

ದತ್ತು ಪಡೆದ 75 ಕ್ರೀಡಾಪಟುಗಳಿಗೆ ಸರ್ಕಾರದಿಂದ ತರಬೇತಿ
ಕಳೆದ ಆಗಸ್ಟ್ 15 ರಂದು 75 ಕ್ರೀಡಾಪಟುಗಳನ್ನು ದತ್ತುಪಡೆದು, ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ತರಬೇತಿ ನೀಡಲಾಗುತ್ತಿದೆ. 4 ವರ್ಷದ ತರಬೇತಿ, ಉತ್ತಮ ತರಬೇತಿದಾರರು, ಶಾಲಾ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ 10 ಲಕ್ಷ ವಿನಿಯೋಗಿಸಲಾಗಿದ್ದು, ಅವಶ್ಯಕತೆಗೆ ಅನುಸಾರ ಇನ್ನೂ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಈ ಕ್ರೀಡಾಪಟುಗಳು ಉತ್ತಮ ಸಾಧನೆಗಳನ್ನು ಮಾಡಿರಬೇಕು ಎಂದು ವಿವರಿಸಿದರು.

ಕ್ರೀಡಾಸಾಧನೆ ದೇಶದ ಸಂಕೇತ
ಯಾವ ಕ್ರೀಡಾ ಪ್ರತಿಭೆಗಳು ದೇಶದ ಆಸ್ತಿ. ಏಕಾಗ್ರತೆ ಹಾಗೂ ಪರಿಶ್ರಮದಿಂದ ಸಾಧನೆ ಮಾಡಿದರೆ ಯಶಸ್ಸು ಖಂಡಿತ ಲಭಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರೀಡೆಗೆ ಮಹತ್ವವನ್ನು ನೀಡಿದೆ. ಕ್ರೀಡೆ ಹವ್ಯಾಸವಾಗಿ ಪ್ರಾರಂಭವಾಗಿ ರಾಷ್ಟ್ರೀಯ ಸಂಕೇತವಾಗಿ ಇತ್ತೀಚೆಗೆ ಪರಿಗಣಿಸಲಾಗುತ್ತಿದೆ. ಒಂದು ರಾಷ್ಟ್ರವನ್ನು ಅದರ ಕ್ರೀಡಾ ಸಾಧನೆಯ ಮೇಲೆ ಗುರುತಿಸಲಾಗುತ್ತಿದೆ.
ಭಾರತದಂತಹ ರಾಷ್ಟ್ರದಲ್ಲಿ ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಜೀತೋ ಇಂಡಿಯಾ ಎಂಬ ಕಾರ್ಯಕ್ರಮಗಳ ಮೂಲಕ ಕ್ರೀಡೆಗಳ ಬಗ್ಗೆ ಜಾಗೃತಿ ಮೂಡಿದೆ. ಪರಿಣಾಮವಾಗಿ ಹಿಂದಿನ ಒಲಂಪಿಕ್ಸ್ ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವಂತಾಯಿತು. ಪ್ಯಾರಾ ಒಲಂಪಿಕ್ಸ್ ನಲ್ಲಿಯೂ ಭಾರತ ಮಹತ್ತರ ಸಾಧನೆಗಳನ್ನು ಮಾಡಿದೆ ಎಂದು ಕ್ರೀಡಾಸಾಧಕರನ್ನು ಬೊಮ್ಮಾಯಿ ಅಭಿನಂದಿಸಿದರು.

ಕ್ರೀಡಾಪಟುಗಳಿಗೆ ಗೃಹ ಇಲಾಖೆಯಲ್ಲಿ ಶೇ.2ಮೀಸಲಾತಿ
ಯುವಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆ ಪ್ರಮುಖವಾಗಿದ್ದು, ಇವೆರಡಕ್ಕೂ ಸಮಾನ ಮಹತ್ವ ನೀಡುವಂತಹ ನೀತಿಯನ್ನು ರೂಪಿಸಲಾಗುತ್ತಿದೆ. ಕ್ರೀಡೆಗೆ ದೇಹದ ಹಾಗೂ ಮನಸ್ಸಿನ ಆರೋಗ್ಯದ ಜೊತೆಗೆ ಗೆಲ್ಲಲೇಬೇಕೆಂದು ಆಡುವುದು ಬಹಳ ಮುಖ್ಯ. ಕೇವಲ ಸೋಲಬಾರದು ಎಂದು ಆಡುವ ಭಾವನೆ ಕ್ರೀಡಾಪಟುಗಳಲ್ಲಿ ಇರಬಾರದು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಗೆಲ್ಲಲೇಬೇಕೆಂಬ ಸಕಾರಾತ್ಮಕ ಭಾವನೆಯಿಂದ ಆಡಿದರೆ ಗೆಲುವು ನಿಮ್ಮದಾಗುತ್ತದೆ. ರಾಜ್ಯ ಸರ್ಕಾರ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಬಹಳ ಮಹತ್ವ ನೀಡುತ್ತಿದೆ. ಗೃಹ ಇಲಾಖೆಯ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ರ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ. ರಾಜ್ಯ ಸರ್ಕಾರದಲ್ಲಿ ಕ್ರೀಡೆಗಳಿಗೆ ಪ್ರಾಶಸ್ತ್ಯ ನೀಡುವ ನಾಯಕರು, ಆಡಳಿತಗಾರರು ನಮ್ಮಲ್ಲಿದ್ದಾರೆ. ಇದರಿಂದಾಗಿ ಕ್ರೀಡೆಗೆ ಉತ್ತೇಜನ ನೀಡುವಂತಹ ನೀತಿಗಳನ್ನು ಜಾರಿಗೆ ತರಲು ಸಾಧ್ಯವಾಗಿದೆ ಎಂದರು.

ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ
ಗ್ರಾಮಗಳಲ್ಲಿ ನಿಜವಾದ ಕ್ರೀಡಾ ಪ್ರತಿಭೆಗಳು ಇದ್ದಾರೆ. ಅವರಿಗೆ ಸೂಕ್ತ ತರಬೇತಿ ನೀಡಿದ್ದಲ್ಲಿ ಮಹತ್ತರ ಸಾಧನೆಗಳನ್ನು ಮಾಡಲು ಶಕ್ತರಾಗಿರುತ್ತಾರೆ. ಆದ್ದರಿಂದ ಗ್ರಾಮ, ತಾಲ್ಲೂಕು, ಜಿಲ್ಲಾಪಂಚಾಯತಿ ಹಂತಗಳಲ್ಲಿ ಕೋಕೋ, ಕಬ್ಬಡ್ಡಿ, ಕುಸ್ತಿ, ವಾಲಿಬಾಲ್, ಕಂಬಳ ಇನ್ನಿತರ ಗ್ರಾಮೀಣ ಕ್ರೀಡಾಕೂಟವನ್ನು ಈ ವರ್ಷದಿಂದ ಪ್ರಾರಂಭಿಸಲಾಗಿದೆ.
ಕ್ರೀಡೆಗಳಲ್ಲಿ ತೊಡಗಿದವರು ಹೆಚ್ಚಾಗಿ ಕ್ರೀಡಾ ಮನೋಭಾವವನ್ನು ಹೊಂದಿದವರಾಗಿರುತ್ತಾರೆ. ಇಂತಹ ಕ್ರೀಡಾಪಟುಗಳು ಸೋಲನ್ನೂ ಸಹ ಗೆಲುವಿಗೆ ಪರಿವರ್ತಿಸಲು ಶ್ರಮಿಸುತ್ತಾರೆ. ಕ್ರೀಡಾಸಾಧಕರ ಬೆಂಬಲವಾಗಿ ಅವರ ಕುಟುಂಬ ವರ್ಗದವರು, ತರಬೇತುದಾರರ ಪರಿಶ್ರಮವೂ ಇರುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಶಾಸಕ ರಿಜ್ವಾನ್ ಅರ್ಷದ್, ಕರ್ನಾಟಕ ಓಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications