ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲೆಗಳಿಗೆ 5 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರದ ಒಪ್ಪಿಗೆ

|
Google Oneindia Kannada News

ಬೆಂಗಳೂರು, ಜೂನ್ 19; ಕರ್ನಾಟಕ ಸರ್ಕಾರ 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಒಪ್ಪಿಗೆ ನೀಡಿದೆ.

ಉತ್ತಮ ಗುಣಮಟ್ಟದ ಶೈಕ್ಷಣಿಕ ಬಲವರ್ಧನೆಯ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 22,000 ಹಾಗೂ ಪ್ರೌಢ ಶಾಲೆಗಳಲ್ಲಿ 5078 ಒಟ್ಟು 27078 ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಮಂಜೂರಾತಿ ನೀಡಿದೆ.

Breaking; ಸರ್ಕಾರಿ ಶಾಲೆ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಹೆಚ್ಚಳ Breaking; ಸರ್ಕಾರಿ ಶಾಲೆ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಹೆಚ್ಚಳ

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು 30/4/2022 ಮತ್ತು 10/5/2022 ರಂದು ಪತ್ರಗಳಲ್ಲಿ 2022-23ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 8000 ಮತ್ತು ಪ್ರೌಢಶಾಲೆಗಳಿಗೆ 2000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ಕೋರಿದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ; ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ ಬೆಂಗಳೂರು ಗ್ರಾಮಾಂತರ ಜಿಲ್ಲೆ; ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ

Govt Approved For 5000 Guest Teacher Recruitment For Primary High School

ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ 30/4/2022 ಮತ್ತು 10/5/2022ರ ಪ್ರಸ್ತಾವನೆಯನ್ನು ಪರಿಶೀಲಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2022-23ನೇ ಸಾಲಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ.

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಆದೇಶದ ಅನ್ವಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ಹೆಚ್ಚುವರಿಯಾಗಿ 4000 ಅತಿಥಿ ಶಿಕ್ಷಕರನ್ನು ಹಾಗೂ ಪ್ರೌಢಶಾಲೆಗಳಲ್ಲಿ ಹೆಚ್ಚುವರಿಯಾಗಿ 1000 ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಆದೇಶ ಮಾಡಲಾಗಿದೆ.

ರಾಜ್ಯ ಸರ್ಕಾರದ ಆದೇಶ; ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ ಇಪಿ 14 ಎಸ್ಇಎಸ್ 2022. ದಿನಾಂಕ 18/6/2022ರಲ್ಲಿ ಅತಿಥಿ ಶಿಕ್ಷಕರ ನೇಮಕ ಕುರಿತು ಆದೇಶ ಹೊರಡಿಸಲಾಗಿದೆ.

Govt Approved For 5000 Guest Teacher Recruitment For Primary High School

ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನಲೆಯಲ್ಲಿ 2022-23ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ 5000 ಅತಿಥಿ ಶಿಕ್ಷಕರನ್ನು ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿ ಮಾಡುವ ತನಕ ಅಥವ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದೊ ಮೊದಲೋ ಅಲ್ಲಿಯವರೆಗೆ ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇರೆಗೆ ನೇಮಕ ಮಾಡಲು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಸರ್ಕಾರ ಮಂಜೂರಾತಿ ನೀಡಲಾಗಿದೆ.

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 4000, ಸರ್ಕಾರಿ ಪ್ರೌಢಶಾಲೆಗಳಲ್ಲಿ 1000 ಸೇರಿದಂತೆ ಒಟ್ಟು 5000 ಹುದ್ದೆಗಳನ್ನು ಭರ್ತಿ ಮಾಡಲು ಒಪ್ಪಿಗೆ ಕೊಡಲಾಗಿದೆ.

ಷರತ್ತುಗಳು

* ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬೋಧಕ ಹುದ್ದೆಗಳನ್ನು ಕೆಲಸದ ಹೊರೆಗನುಗುಣವಾಗಿ ತರ್ಕಬದ್ಧವಾಗಿ ಹಂಚಿಕೆ ಮಾಡುವಂತೆ ಮತ್ತು ಎಲ್ಲಾ ಬೋಧನಾ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಆಯುಕ್ತು/ ಅಪರ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ ಇವರು ಖಚಿತಪಡಿಸಿಕೊಳ್ಳತಕ್ಕದ್ದು.

* 1 ರಿಂದ 10ನೇ ತರಗತಿಗಳಿಗೆ ಮಾತ್ರ ಶಾಲಾವಾರು, ತಾಲೂಕುವಾರು ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ಅಗತ್ಯ ಕ್ರಮ ವಹಿಸುವುದು.

* ಜಿಲ್ಲಾ ಉಪ ನಿರ್ದೇಶಕರು ಪ್ರಾಥಮಿಕ/ ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯಿಂದಾಗಿ ವಿದ್ಯಾರ್ಥಿಗಳ ಶಿಕ್ಷಕರ ಅನುಪಾತವನ್ನು ಗಮನಿಸಿ ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡುವುದು.

* ಅತಿಥಿ ಶಿಕ್ಷಕರ ಆಯ್ಕೆಯ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು (1 ರಿಂದ 8ನೇ ತರಗತಿಗಳಿಗೆ) ಮಾತ್ರ ನೇಮಕ ಮಾಡುವುದು.

* ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅತ್ಯಾವಶ್ಯಕ ಖಾಲಿ ಹುದ್ದೆಗಳಿಗೆ ಆದ್ಯತೆ ಮೇರೆಗೆ ನೇಮಿಸುವುದು.

English summary
Karnataka government approved for 5000 guest teacher recruitment for primary and high school in the academic year of 2022-23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X