2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ, ವೇತನ ವಿವರ

ಬೆಂಗಳೂರು, ಆಗಸ್ಟ್ 31: ಉಪನ್ಯಾಸಕರ ನೇಮಕಾತಿಗೆ ಕಾಯುತ್ತಿರುವವರಿಗೆ ಸಿಹಿಸುದ್ದಿ ಇದೆ. ಆಯುಕ್ತರು, ಕಾಲೇಜು & ತಾಂತ್ರಿಕ ಶಿಕ್ಷಣ ಇಲಾಖೆ 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ಪ್ರಕಟಣೆಯನ್ನು ಹೊರಡಿಸಿದೆ. ಆಗಸ್ಟ್‌ 31ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಅತಿಥಿ ಉಪನ್ಯಾಸಕರಿಗೆ ಎಷ್ಟು ವೇತನ? ಎಂದು ಸಹ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಮೆರಿಟ್‌ ಲಿಸ್ಟ್‌ ತಯಾರು ಮಾಡುವ ಮಾನದಂಡ, ಅಭ್ಯರ್ಥಿಗಳ ವಿಷಯವಾರು ಮೆರಿಟ್ ಲಿಸ್ಟ್ ಪ್ರಕಟಿಸುವ ದಿನಾಂಕಗಳನ್ನು ಸಹ ಘೋಷಣೆ ಮಾಡಲಾಗಿದೆ.

ಪ್ರಕಟಣೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ತಿಳಿಸಲಾಗಿದೆ.

Govt First Grade College Guest Lecturer Recruitment Education Qualification And Salary

ವಿದ್ಯಾರ್ಹತೆಯ ವಿವರಗಳು: ಅಭ್ಯರ್ಥಿಯು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ 25% ಅನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. (ಉದಾ: ಅಭ್ಯರ್ಥಿಯು ಸ್ನಾತಕೋತ್ತರ ಪದವಿಯಲ್ಲಿ ಶೇಕಡ 60 ಅಂಕ ಪಡೆದಿದಲ್ಲಿ ಅದರ ಶೇಕಡ 25ರಷ್ಟು ಭಾಗವನ್ನು ಅಂದರೆ 15 ಅಂಕಗಳು). ಗರಿಷ್ಠ ಅಂಕಗಳು 15. ಹೆಚ್ಚುವರಿ ವಿದ್ಯಾರ್ಹತೆ. ಪಿಹೆಚ್.ಡಿ ವಿದ್ಯಾರ್ಹತೆ ಪಡೆದಿದ್ದಲ್ಲಿ ಗರಿಷ್ಠ ಅಂಕ 12, ಎನ್‌ಇಟಿ/ ಕೆ-ಸೆಟ್/ ಎಸ್ಎಲ್‌ಇಟಿ ಪಡೆದಿದ್ದಲ್ಲಿ 9, ಎಂ.ಫಿಲ್. ವಿದ್ಯಾರ್ಹತೆ ಪಡೆದಿದ್ದಲ್ಲಿ 6 ಅಂಗಳು.

ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 16 ವರ್ಷಗಳಿಗೆ 48 ಅಂಕಗಳನ್ನು ಮಿತಿಗೊಳಿಸಲಾಗುವುದು. ಸೇವೆಗೆ ಅಂಕಗಳನ್ನು ನಿರ್ಧರಿಸಲು ಪ್ರತಿ ಶೈಕ್ಷಣಿಕ ವರ್ಷದ 8 ತಿಂಗಳು ಮತ್ತು ಹೆಚ್ಚಿನ ಅವಧಿಯ (ಅಂದರೆ, ಶೈಕ್ಷಣಿಕ ವರ್ಷದಲ್ಲಿ 240 ದಿನಗಳ) ಸೇವೆಯನ್ನು ಒಂದು ವರ್ಷ ಎಂದು ಪರಿಗಣಿಸಲಾಗುವುದು. ಶೈಕ್ಷಣಿಕ ವರ್ಷದಲ್ಲಿನ 8 ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಭಾಗಶಃ ವರ್ಷವೆಂದೂ ಪರಿಗಣಿಸಿ ಒಟ್ಟು ಸೇವಾವಧಿಗೆ ಪರಿಗಣಿಸಲಾಗುವುದು. ಅರ್ಹ ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕಗಳನ್ನು ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಮಾನದಂಡಗಳನ್ನು ಅನುಸರಿಸಿ, ಅಭ್ಯರ್ಥಿಗಳು ಅರ್ಜಿಯಲ್ಲಿ ನೀಡಿರುವ ವಿದ್ಯಾರ್ಹತೆ ಮತ್ತು ಸೇವಾ ವಿವರಗಳ ಆಧಾರದ ಮೇಲೆ ರಾಜ್ಯವ್ಯಾಪಿ ಮೆರಿಟ್ ಪಟ್ಟಿ ಪ್ರಕಟಿಸಲಾಗುತ್ತದೆ. 2024-25ನೇ ಸಾಲಿನಲ್ಲಿ ಉಪನ್ಯಾಸಕರ ವರ್ಗಾವಣೆ ಹಾಗೂ ಹೊಸ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ನೇಮಕಾತಿ/ ವರ್ಗಾವಣೆಗೊಂಡ ಖಾಯಂ ಉಪನ್ಯಾಸಕರು ಕಾಲೇಜುಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವುದರಿಂದ ಕಾಲೇಜುಗಳಲ್ಲಿ ಲಭ್ಯವಾಗುವ ಹೆಚ್ಚುವರಿ ಕಾರ್ಯಭಾರದಲ್ಲಿ ವ್ಯತ್ಯಯವಾಗುವ ಸಂಭವವಿರುತ್ತದೆ. ಆದ್ದರಿಂದ ಪ್ರಾರಂಭಿಕವಾಗಿ ಕಾಲೇಜುಗಳಲ್ಲಿ ವಿಷಯವಾರು ಮಂಜೂರಾಗಿರುವ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಉಪನ್ಯಾಸಕರಿಗೆ ಹಾಗೂ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಹೆಚ್ಚುವರಿ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

2023-24ನೇ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿ, 2024-25ನೇ ಸಾಲಿಗೆ ಅತಿಥಿ ಉಪನ್ಯಾಸಕ ಸೇವೆಗೆ ಅರ್ಜಿ ಸಲ್ಲಿಸಿ ಅವಶ್ಯಕ ಮೆರಿಟ್ ಪಡೆಯುವ ಹಾಗೂ 2023-24ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿದ ಕಾಲೇಜಿನಲ್ಲಿಯೇ ಮುಂದುವರೆಯಲು ಇಚ್ಛಿಸುವ ಅಭ್ಯರ್ಥಿಗಳನ್ನು ಸದರಿ ಕಾಲೇಜಿನಲ್ಲಿನ ಕಾರ್ಯಭಾರದ ಲಭ್ಯತೆಗೆ ಅನುಸಾರವಾಗಿ ಅದೇ ಕಾಲೇಜಿನಲ್ಲಿ ಮುಂದುವರೆಯಲು ಅವಕಾಶ ಕಲ್ಪಿಸಲಾಗುವುದು. 2023-24ನೇ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ್ದ ಅಭ್ಯರ್ಥಿಗಳು ಅದೇ ಕಾಲೇಜಿನಲ್ಲಿ 2023-24ನೇ ಸಾಲಿನಲ್ಲಿಯೂ ಮುಂದುವರೆಯಲು ಇಚ್ಚಿಸಿದಲ್ಲಿ ಅಭ್ಯರ್ಥಿಗಳು ಆನ್-ಲೈನ್ ಅರ್ಜಿಯಲ್ಲಿ Continuation Option ಅನ್ನು ಆಯ್ಕೆ ಮಾಡುವ ಮುನ್ನ ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರಿಂದ ಕಾರ್ಯಭಾರದ ಮಾಹಿತಿಯನ್ನು ಪಡೆದುಕೊಳ್ಳುವುದು.

ಕೌನ್ಸೆಲಿಂಗ್ ವೇಳೆಗೆ ಕಾಲೇಜು ಪ್ರಾಂಶುಪಾಲರಿಂದ eMIS ಮೂಲಕ ಪಡೆದ ಕಾರ್ಯಭಾರದ ಮಾಹಿತಿಯನ್ನು ಆಧರಿಸಿ 2023-24ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿದ ಕಾಲೇಜಿನಲ್ಲಿ 2024- 25ನೇ ಸಾಲಿನಲ್ಲಿಯೂ ಮುಂದುವರಿಯಲು ಸಾಧ್ಯವಿರುವ ಅಭ್ಯರ್ಥಿಗಳ ಪಟ್ಟಿಯನ್ನು ಪಕಟಿಸಲಾಗುವುದು. ಅಭ್ಯರ್ಥಿಗಳು ಆಗಸ್ಟ್‌ 31ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಕೆ ಮಾಡಲು ಇಲಾಖೆಯ ಅಂತರ್ಜಾಲ ತಾಣ dce.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

ವೇತನ ವಿವರ: ಆಯ್ಕೆಯಾಗುವ ಅತಿಥಿ ಉಪನ್ಯಾಸಕರಿಗೆ ಸರ್ಕಾರದ ಆದೇಶದಂತೆ ನಿಗದಿಪಡಿಸಿರುವ ಪರಿಷ್ಕೃತ ಗೌರವಧನವನ್ನು ನಿಯಮಾನುಸಾರ ನಿರ್ವಹಿಸುವ ಕಾರ್ಯಭಾರಕ್ಕೆ ಹಾಗೂ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿರುವ ಅರ್ಹತೆಗೆ (ವಿದ್ಯಾರ್ಹತೆ/ ಸೇವಾ ಅವಧಿ) ಅನುಗುಣವಾಗಿ ಪರಿಗಣಿಸಲಾಗುವುದು.

* 5 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 35,000 ರೂ.ಗಳು. 5 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತ ಹೊಂದಿಲ್ಲದವರಿಗೆ 31,000 ರೂ.ಗಳು. 5 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 38,000 ರೂ.ಗಳು. 5 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 34,000 ರೂ.ಗಳು.

10 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 39,000 ರೂ.ಗಳು. 10 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 15 ವರ್ಷಕ್ಕಿಂತ ಕಡಿಮೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ, ಹೊಂದಿಲ್ಲದವರಿಗೆ 35,000 ರೂ.ಗಳು. 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 40,000 ರೂ.ಗಳು. 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 36,000 ರೂ.ಗಳು.

ಅತಿಥಿ ಉಪನ್ಯಾಸಕರಿಗೆ ಕಲಾ/ ವಾಣಿಜ್ಯ/ ಭಾಷಾ ವಿಷಯಗಳಿಗೆ ಗರಿಷ್ಠ 15 ಗಂಟೆಗಳ ಹಾಗೂ ವಿಜ್ಞಾನ ವಿಷಯಗಳು/ ಪ್ರಾಯೋಗಿಕ ತರಗತಿಗಳಿರುವ ವಿಷಯಗಳಿಗೆ ಗರಿಷ್ಠ 19 ಗಂಟೆಗಳ ಕಾರ್ಯಭಾರವನ್ನು ಮಾತ್ರ ಹಂಚಿಕೆ ಮಾಡಲಾಗುವುದು ಹಾಗೂ 15/19 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಲಭ್ಯವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನವನ್ನು ಪರಿಗಣಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+